ಮಡಿಕೇರಿ, ಜು. ೧೯: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಪಾಂಡAಡ ಕುಟ್ಟಣಿ ಕುಟ್ಟಪ್ಪ ಇವರ ಜ್ಞಾಪಕಾರ್ಥವಾಗಿ ಅವರ ಪುತ್ರÀ ಪಾಂಡAಡ ಬೋಪಣ್ಣ ಅವರ ಸಹಕಾರದೊಂದಿಗೆ ಕರಡದಲ್ಲಿ ಆಗಸ್ಟ್ ೧೪ ರಂದು “ಬೇಲ್‌ನಮ್ಮೆ” ನಡೆಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಸಚಿವ ಚೆಲುವರಾಯಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರುಗಳು ಭಾಗವಹಿಸಲಿದ್ದಾರೆ. ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ಸಹಕಾರದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಕಾರ್ಯಕ್ರಮದಲ್ಲಿ ವಿಚಾರಮಂಡನೆ, ಕೃಷಿಕ ಪ್ರಶಸ್ತಿ ಹಾಗೂ ವಿವಿಧ ಬಗೆಯ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.