ಸಿದ್ದಾಪುರ, ಜು. ೧೯: ನೆಲ್ಲಿಹುದಿಕೇರಿ ಇತಿಹಾಸ ಪ್ರಸಿದ್ಧ ಶ್ರೀ ಸತ್ಯನಾರಾಯಣ ದೇವಾಲಯದಲ್ಲಿ ಗುರು ಪೂರ್ಣಿಮಾ ಅಂಗವಾಗಿ. ತಾ. ೨೧ ರಂದು ಸಂಜೆ ೬ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಇದಕ್ಕೂ ಮೊದಲು ಸಂಜೆ ೫ ಗಂಟೆಗೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ತಂಡದಿAದ ಸತ್ಸಂಗ, ಭಜನೆ ರಸಸಂಜೆ ನಡೆಯಲಿದೆ ಎಂದು ಶ್ರೀ ಸತ್ಯನಾರಾಯಣ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಟಿ.ಜಿ. ಚಂದ್ರಶೇಖರ್ ತಿಳಿಸಿದ್ದಾರೆ.