ವೀರಾಜಪೇಟೆ, ಜು. ೧೯: ಮಾಧ್ಯಮ ಮತ್ತು ಆಡಳಿತ ವ್ಯವಸ್ಥೆಯಿಂದ ಸಮಾಜದ ಅಭಿವೃದ್ದಿ ಸಾಧ್ಯ ಎಂದು ವೀರಾಜಪೇಟೆ ತಹಶೀಲ್ದಾರ್ ಎಚ್.ಎನ್. ರಾಮಚಂದ್ರ ಹೇಳಿದರು.

ವೀರಾಜಪೇಟೆಯ ಖಾಸಗಿ ಸಭಾಂಗಣದಲ್ಲಿ ನಡೆದ ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರಶಸ್ತಿ ಪ್ರದಾನ, ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಸಮಾಜದ ಓರೆಕೋರೆಗಳನ್ನು ತಿದ್ದುವ ಮೂಲಕ ಉತ್ತಮ ಸಮಾಜವನ್ನು ರೂಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು, ಮಾಧ್ಯಮದಿಂದ ಸಮಾಜವನ್ನು ತಿದ್ದುವ ಕಾರ್ಯ ನಡೆಯುತ್ತಿದೆ. ಆಡಳಿತ ವ್ಯವಸ್ಥೆಗೆ ಕೂಡ ಮಾಧ್ಯಮದ ಪಾತ್ರ ಅಪಾರ. ಸರ್ಕಾರದ ಯಾವುದೇ ಕಾರ್ಯಕ್ರಮಗಳು ಜನರಿಗೆ ತಲುಪಲು ಮಾಧ್ಯಮದ ಕೊಡುಗೆ ಹೆಚ್ಚಿದೆ. ಪÀತ್ರಿಕೆಗಳನ್ನು ಓದುವುದರಿಂದ ಸಮಸ್ಯೆಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಅಲ್ಲದೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪತ್ರಿಕಾ ವರದಿಗಳು ಮತ್ತು ಪತ್ರಕರ್ತರ ಸಹಕಾರ ಅತ್ಯಗತ್ಯವಾಗಿದೆ. ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲ, ಗುಹ್ಯ ಅಗಸ್ತೆö್ಯÃಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ವೆಂಕಟೇಶ್ ಮಾತನಾಡಿ, ದೇಶದ ಭವಿಷ್ಯ ತರಗತಿ ರೂಪುಗೊಳ್ಳುವುದು ಶಾಲಾ ಕೊಠಡಿಗಳಲ್ಲಿ. ಮಕ್ಕಳ ಹಿನ್ನೆಲೆಯನ್ನು ಅರ್ಥೈಸಿಕೊಂಡು ನೀಡುವ ಶಿಕ್ಷಣ ಪ್ರಯೋಜನಕಾರಿ. ಇದರಿಂದ ಸಮಾಜದಲ್ಲಿ ಋಣಾತ್ಮಕ ಅಂಶಗಳು ಕಡಿಮೆಯಾಗುತ್ತವೆ. ಅಂತೆಯೇ ಪತ್ರಕರ್ತರು ತಮ್ಮ ಕರ್ತವ್ಯ ವನ್ನು ಸಮರ್ಥವಾಗಿ ನಿಭಾಯಿಸು ತ್ತಿದ್ದಾರೆ. ಗ್ರಾಮಾಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಅಪಾರ. ಮಾಧ್ಯಮ ಇಲ್ಲದೆ ಸಮಾಜ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಪ್ರತಿಯೊಬ್ಬರಿಗೂ ಸಂಘ ಶಕ್ತಿ ಮುಖ್ಯವಾಗಿದೆ. ಏಕ ವ್ಯಕ್ತಿಯಿಂದ ಏನೂ ಮಾಡಲು ಸಾಧ್ಯವಿಲ್ಲ. ಪತ್ರಕರ್ತರು ಸದಾ ಕ್ರೀಯಾಶೀಲ ರಾಗಿರಬೇಕು ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಸವಿತಾ ರೈ ಮಾತನಾಡಿ, ಪತ್ರಿಕಾ ರಂಗದಲ್ಲಿ ದೊರೆಯುವ ಸತ್ಯವನ್ನು ಹೇಳುವ ಧೈರ್ಯ ಬೇರೆ ಯಾವುದೇ ಕ್ಷೇತ್ರದಲ್ಲಿ ದೊರೆಯದು. ಸದಸ್ಯರು ಒಂದಾಗಿ ಸಂಘವನ್ನು ಮುನ್ನಡೆಸಬೇಕಿದೆ ಎಂದರು. ರಾಜ್ಯ ಸಮಿತಿ ಸದಸ್ಯ ಟಿ. ಎನ್. ಮಂಜುನಾಥ್ ಸಂಘದ ಚಟುವಟಿಕೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ರಜಿತ್ ಕುಮಾರ್ ಗುಹ್ಯ ಮಾತನಾಡಿದರು. ಇದೇ ಸಂದರ್ಭ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಸಂಘದ ಸದಸ್ಯ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ಪ್ರದಾನ : ವೀರಾಜಪೇಟೆ ಕ್ಷೇತ್ರದ ಶಾಸಕÀ ಎ.ಎಸ್. ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಯನ್ನು ಎ.ಎನ್. ವಾಸು ಅವರಿಗೆ ಪ್ರದಾನ ಮಾಡಲಾಯಿತು.

ವೀರಾಜಪೇಟೆ ಪ್ರಗತಿ ಶಾಲೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅವರು ತಮ್ಮ ತಾಯಿ ದಿವಂಗತ ತುಂಗಾ ಪೂವಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯತ್ತಮ ಶೈಕ್ಷಣಿಕ ವರದಿ ಕುರಿತ ಪ್ರಶಸ್ತಿಯನ್ನು ಬಡಕಡ ರಜಿತಾ ಕಾರ್ಯಪ್ಪ ಅವರಿಗೆ ನೀಡಲಾಯಿತು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾ ರೈ ಅವರು ತಮ್ಮ ತಂದೆ ದಿವಂಗತ ಬಿ.ಎಸ್ ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿಗೆ ಪಿ.ವಿ ಅಂತೋಣಿ, ಸಿದ್ದಾಪುರದ ಸಮಾಜ ಸೇವಕ ಕೆ.ಯು ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿಗೆ ರವಿ ಕುಮಾರ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಕೋಲತಂಡ ರಘು ಮಾಚಯ್ಯ ಅವರು ತಮ್ಮ ತಂದೆ ದಿವಂಗತ ಕೋಲತಂಡ ಉತ್ತಪ್ಪ ಹಾಗೂ ತಾಯಿ ಕಾಮವ್ವ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಅರಣ್ಯ ಮತ್ತು ವನ್ಯಜೀವಿ ವರದಿ ಕುರಿತ ಪ್ರಶಸ್ತಿಯನ್ನು ಆರ್. ಸುಬ್ರಮಣಿ ಅವರಿಗೆ ಪ್ರದಾನ ಮಾಡಲಾಯಿತು.

ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರÀ ಸಂಘದಿAದ ನೀಡುವ ಪ್ರತಿಭಾ ಪುರಸ್ಕಾರವನ್ನು ಪಡೆದ ಕೆ. ಈಶಾನ್ವಿ, ರಾಗ ಹೇಮಂತ್ ಶೆಟ್ಟಿ, ಹಿಮಾನಿ, ರಕ್ಷನ್, ಜೀಷ್ಮ, ಜಶ್ಮಿತಾ ಹಾಗೂ ಸಮೃದ್ಧಿ ಅವರಿಗೆ ಪ್ರದಾನ ಮಾಡಲಾಯಿತು.