ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಶಶಿ ತರೂರ್ ಆಕ್ಷೇಪ
ನವದೆಹಲಿ, ಜು. ೧೯: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕರ್ನಾಟಕ ಸರ್ಕಾರದ ಮಸೂದೆಗೆ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಸಂಸದ ಶಶಿತರೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರದ ಕ್ರಮವು ಸಂವಿಧಾನ ವಿರೋಧ ಹಾಗೂ ವಿವೇಚನಾ ರಹಿತ ಕ್ರಮ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದು, ಮಾತ್ರವಲ್ಲದೇ ಘೋಷಿಸಿದ ಕ್ರಮದಿಂದ ಹಿಂದೆ ಸರಿದ ಸಿದ್ದರಾಮಯ್ಯ ಸರ್ಕಾರದ ಕ್ರಮದ ಕುರಿತು ತರೂರ್ ಸಂತಸ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ಪ್ರಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ದೇಶದೊಳಗೆ ಸ್ವತಂತ್ರವಾಗಿ ಬದುಕುವ, ವೃತ್ತಿ ಕೈಗೊಳ್ಳುವ ಹಾಗೂ ಸಂಚರಿಸುವ ಮುಕ್ತ ಅವಕಾಶವನ್ನು ನೀಡಲಾಗಿದೆ. ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂಥ ಕಾನೂನು ಜಾರಿಗೆ ತರಲು ಹೊರಟರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಯದ್ದು ಬುದ್ಧಿವಂತಿಕೆಯ ನಿರ್ಧಾರವಲ್ಲ ಎಂದು ಹೇಳಿದ್ದಾರೆ. ಸರ್ಕಾರದ ಈ ಕ್ರಮದಿಂದ ಅಲ್ಲಿನ ವಹಿವಾಟು, ಉದ್ದಿಮೆಗಳು ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳಕ್ಕೆ ಸ್ಥಳಾಂತರಗೊಳ್ಳುವ ಅಪಾಯವೂ ಇದೆ ಎಂದು ಶಶಿ ತರೂರ್ ಎಚ್ಚರಿಕೆ ನೀಡಿದ್ದಾರೆ.
ಏರ್ಲೈನ್ಸ್, ಬ್ಯಾಂಕಿAಗ್ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ನವದೆಹಲಿ, ಜು. ೧೯: ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ಏರ್ಲೈನ್ಸ್, ಬ್ಯಾಂಕಿAಗ್ ಸೇರಿದಂತೆ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಹೊಸ ಕ್ರೌಡ್ಸ್ಟೆçöÊಕ್ (ಸೈಬರ್ ಸೆಕ್ಯುರಿಟಿ ಸಾಫ್ಟ್ವೇರ್ ಸಂಸ್ಥೆ) ಅಪ್ಡೇಟ್ ಸ್ಥಗಿತಕ್ಕೆ ಕಾರಣ ಎಂದು ಉಲ್ಲೇಖಿಸಲಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂರ್ರಾಷ್ಟಿçÃಯ ವಿಮಾನ ನಿಲ್ದಾಣಕ್ಕೂ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ತಟ್ಟಿದ್ದು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಉಂಟಾಗಿದೆ. ಚೆಕ್ಇನ್, ಬೋರ್ಡಿಂಗ್ಗಳಲ್ಲಿ ವಿಳಂಬ ಉಂಟಾಗಿ, ಹಲವು ವಿಮಾನಗಳು ರದ್ದುಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೈಕ್ರೋ ಸಾಫ್ಟ್ ಸ್ಥಗಿತವು ಹಲವಾರು ವಿಮಾನಯಾನ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ. ದೆಹಲಿ, ಬೆಂಗಳೂರು ಮತ್ತು ಮುಂಬೈ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಅಡ್ಡಿಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳಿ ಮೇಲೆ ಮಲಗಿದ್ದ ಯುವಕರು; ಮೂವರ ದುರ್ಮರಣ
ಗಂಗಾವತಿ, ಜು. ೧೯: ರೈಲ್ವೆ ಟ್ರಾö್ಯಕ್ ಮೇಲೆ ಮದ್ಯಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ. ಔತಣಕೂಟದ ಬಳಿಕ ತಮಾಷೆ ಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಇಲ್ಲಿನ ರೈಲ್ವೆ ಸ್ಟೇಷನ್ ಸಮೀಪ ಗುರುವಾರ ತಡರಾತ್ರಿ ನಡೆದಿದೆ. ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (೨೩), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (೨೩) ಹಾಗೂ ಹಿರೇಜಂತಕಲ್ನ ವೆಂಕಟ ಭೀಮರಾಯ ಮಂಗಳೂರು (೨೦) ಮೃತ ಪಟ್ಟಿದ್ದಾರೆ. ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಔತಣಕೂಟ ಮಾಡಿದ್ದಾರೆ. ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಬಂದಿದ್ದು, ಯುವಕರು ಭೀಕರವಾಗಿ ಸಾವನ್ನಪ್ಪಿದ್ದಾರೆ. ಗದಗ ವಿಭಾಗದ ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.