ಕುಶಾಲನಗರ, ಜು. ೨೦: ಕಾವೇರಿ ನದಿ ನಿರ್ವಹಣೆ ಕಾಮಗಾರಿ ಬಗ್ಗೆ ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಕಾವೇರಿ ನದಿ ಪ್ರವಾಹದಿಂದ ನದಿ ತಟದ ಕೆಲವು ಬಡಾವಣೆಗಳು ಪ್ರವಾಹಕ್ಕೆ ತುತ್ತಾಗುತ್ತಿರುವುದು ಬೆಳವಣಿಗೆ ಯಾಗಿದೆ. ಈಗಾಗಲೇ ಕೆಲವೊಂದು ಕಡೆ ಬಡಾವಣೆಯ ಮತ್ತು ನದಿ ನಡುವೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆದಿದೆ. ಶಾಶ್ವತವಾಗಿ ಕುಶಾಲನಗರವನ್ನು ಪ್ರವಾಹ ಮುಕ್ತವನ್ನಾಗಿಸಲು ಯೋಜನೆಯನ್ನು ರೂಪಿಸುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ಕ್ಷೇತ್ರದಲ್ಲಿ ಈಗಾಗಲೇ ೨೪ ಅಧಿಕ ಮನೆಗಳು ಮಳೆ ಹಾನಿಗೆ ಒಳಗಾಗಿವೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಮಳೆ ಹಾನಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಸರ್ಕಾರದ ಮೂಲಕ ವಿಶೇಷ ಪ್ಯಾಕೇಜ್ ನೀಡಲು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಕುಶಾಲನಗರ ಮತ್ತು ಸುತ್ತಮುತ್ತ ಗ್ರಾಮಗಳಿಗೆ ವರ್ಷದ ಎಲ್ಲಾ ದಿನಗಳಲ್ಲಿ ೨೪ ಗಂಟೆಗಳ ಕಾಲ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ೪೦ ಕೋಟಿ ವೆಚ್ಚದಲ್ಲಿ ಅಮೃತ್ ಯೋಜನೆ ಮೂಲಕ ಕಾವೇರಿ ನದಿಯಿಂದ ಪಂಪ್ ಮಾಡಿ ನೀರು ಒದಗಿಸುವ ಯೋಜನೆಗೆ ಸದ್ಯದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.

ನದಿ ಬದಿಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ಬಡಾವಣೆಗಳ ಬಗ್ಗೆ ಪ್ಯಾಕೇಜ್ ನೀಡಲು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಕುಶಾಲನಗರ ಮತ್ತು ಸುತ್ತಮುತ್ತ ಗ್ರಾಮಗಳಿಗೆ ವರ್ಷದ ಎಲ್ಲಾ ದಿನಗಳಲ್ಲಿ ೨೪ ಗಂಟೆಗಳ ಕಾಲ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ೪೦ ಕೋಟಿ ವೆಚ್ಚದಲ್ಲಿ ಅಮೃತ್ ಯೋಜನೆ ಮೂಲಕ ಕಾವೇರಿ ನದಿಯಿಂದ ಪಂಪ್ ಮಾಡಿ ನೀರು ಒದಗಿಸುವ ಯೋಜನೆಗೆ ಸದ್ಯದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.

ನದಿ ಬದಿಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ಬಡಾವಣೆಗಳ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಸಂದರ್ಭ ನದಿ ಬದಿಯ ಪ್ರದೇಶಗಳನ್ನು ಒತ್ತುವರಿ ಮಾಡದಂತೆ ಎಚ್ಚರ ವಹಿಸಲಾಗುವುದು.

ಕುಶಾಲನಗರ ಪಟ್ಟಣದ ಅಭಿವೃದ್ಧಿಗಾಗಿ ಸರಕಾರದಿಂದ ಎರಡು ಕೋಟಿ ರೂ.ಗಳ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಿದರು.

ಕುಶಾಲನಗರ ಪಟ್ಟಣದ ಒಳ ಚರಂಡಿ ಯೋಜನೆ ಸೆಪ್ಟೆಂಬರ್ ೧೫ರ ಒಳಗೆ ಕಾರ್ಯಾರಂಭ ಮಾಡಲಿದೆ. ಈ ನಿಟ್ಟಿನಲ್ಲಿ ಒಳಚರಂಡಿ ಯೋಜನೆ ಅಧಿಕಾರಿಗಳಿಗೆ ಗಡುವು ನೀಡಲಾಗಿದ್ದು, ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಈ ಮೂಲಕ ಸ್ವಚ್ಛ ಕಾವೇರಿ ಹಾಗೂ ಸ್ವಚ್ಛ ಪಟ್ಟಣ ನಿರ್ಮಾಣಕ್ಕೆ ಯೋಜನೆ ಸಹಕಾರಿಯಾಗಲಿದೆ ಎಂದರು. ನದಿ ತಟದ ಅಂಚಿನಲ್ಲಿ ಅಳವಡಿಸಿರುವ ಒಳಚರಂಡಿ ಯೋಜನೆಯ ಪೈಪ್‌ಗಳು, ಮ್ಯಾನ್‌ಹೋಲ್‌ಗಳನ್ನು ತೆರವುಗೊಳಿಸಿ ಸಮರ್ಪಕವಾಗಿ ಕಾಮಗಾರಿ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.