ವೀರಾಜಪೇಟೆ, ಜು. ೨೦: ಪತಿ-ಪತ್ನಿಯ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವೀರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ನಡೆದಿದೆ.
ಶಿಲ್ಪಾ ಸೀತಮ್ಮ (೩೮) ಎಂಬವರೆ ಪತಿಯ ಗುಂಡೇಟಿನಿAದ ಮೃತಪಟ್ಟ ಮಹಿಳೆಯಾಗಿದ್ದು, ಗುಂಡು ಹಾರಿಸಿ ಪತ್ನಿಯನ್ನು ಹತ್ಯೆ ಮಾಡಿದ ಪತಿ ನಾಯಕಂಡ ಸಿ. ಬೋಪಣ್ಣ (೪೩) ಬಂದೂಕಿನೊAದಿಗೆ ಪೊಲೀಸರಿಗೆ ಶರಣಾಗಿದ್ದಾನೆ.
ಪತಿ-ಪತ್ನಿ ನಡುವೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ಕಲಹ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಇದು ವಿಕೋಪಕ್ಕೆ ತಿರುಗಿ ಬೋಪಣ್ಣ ತನ್ನ ಮನೆಯಲ್ಲಿದ್ದ ಎಸ್ಬಿವಿಎಲ್ ಬಂದೂಕಿನಿAದ ಶಿಲ್ಪಾ ಸೀತಮ್ಮ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಬಳಿಕ ವೀರಾಜಪೇಟೆ ಪೊಲೀಸರಿಗೆ ಶರಣಾಗಿದ್ದು, ಬಂದೂಕನ್ನು ವಶಪಡಿಸಿ ಕೊಳ್ಳಲಾಗಿದೆ. ಗುಂಡು ಶಿಲ್ಪಾಳ ಬೆನ್ನಿನಿಂದ ಪ್ರವೇಶಿಸಿ ಎದೆಯ ಭಾಗದಿಂದ ಹೊರ ಬಂದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ವೀರಾಜಪೇಟೆ ನಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಪರಾಧ ಪತ್ತೆ ದಳದ ತಜ್ಞರ ತಂಡ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಮೃತೆ ಶಿಲ್ಪಾ ಸೀತಮ್ಮ ೨೦೧೨ರಿಂದ ೨೦೧೭ರವರೆಗೆ ಬೇಟೋಳಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಬೋಪಣ್ಣ ನಗರದ ಹೊರವಲಯದಲ್ಲಿ ಸರ್ವೀಸ್ ಸ್ಟೇಷನ್ ಹೊಂದಿದ್ದಾನೆ.