ಮಡಿಕೇರಿ, ಜು. ೨೦: ಮಳೆಯಿಂದ ಉಂಟಾಗಿರುವ ಹಾನಿಗೆ ಸಂಬAಧಿಸಿದAತೆ ಸಂಬAಧಿಸಿದ ಇಲಾಖೆಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಹೇಳಿದರು.
ಸಚಿವರಾದ ಎನ್.ಎಸ್. ಬೋಸರಾಜು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಇಂದು ಮಡಿಕೇರಿ-ಸಂಪಾಜೆ ರಾಷ್ಟಿçÃಯ ಹೆದ್ದಾರಿಯ ಕರ್ತೋಜಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು ಹಾಗೆಯೇ ಕೊಯನಾಡು ಬಳಿ ಮಳೆಯಿಂದ ಹಾನಿಯಾಗಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದ್ದು, ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುವುದರ ಜೊತೆಗೆ ಶಾಶ್ವತ ಸೂರು ಕಲ್ಪಿಸಲಾಗುವುದು, ಹಾಗೆಯೇ ರಸ್ತೆ, ವಿದ್ಯುತ್, ಬೆಳೆಹಾನಿ, ಮನೆ ಹಾನಿ ಹೀಗೆ ನಷ್ಟದ ಅಂದಾಜು ಪಟ್ಟಿ ಮಾಡಿ, ಸ್ಥಳೀಯ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದು ತಿಳಿಸಿದರು.
ಮಳೆಯಿಂದ ಉಂಟಾಗಿರುವ ನಷ್ಟದ ಸಂಬAಧ ಕಂದಾಯ ಸಚಿವರಿಗೂ ಮಾಹಿತಿ ನೀಡಲಾಗುವುದು. ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ತ್ವರಿತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಹಿರಿಯ ಇಂಜಿನಿಯರ್ಗಳ ಜತೆ ಚರ್ಚಿಸಲಾಗುವುದು ಎಂದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಪ್ರವಾಹ ಹಾಗೂ ಮಳೆಹಾನಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಸಿದ್ಧತೆ ಕೈಗೊಂಡಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಹೆದ್ದಾರಿ ವಿಭಾಗದ ಇಂಜಿನಿಯರ್ ಗಿರೀಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಕೊಲ್ಯದ ಗಿರೀಶ್ ಮತ್ತಿತರರು ಇದ್ದರು.
ಗ್ರಾಮಸ್ಥರ ಮನವಿ
ಮದೆಗ್ರಾಮದ ಕರ್ತೋಜಿಯಲ್ಲಿ ೨೦೧೮ ರಿಂದೀಚೆಗೆ ಪ್ರತಿ ಬಾರಿ ಮಳೆಗಾಲದಲ್ಲಿ ಬರೆಕುಸಿತದಿಂದ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿರುವ ಬದಲಿ ರಸ್ತೆಯಾದ ಮದೆ - ಬಕ್ಕ - ಕರ್ತೋಜಿ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಿ ಮಳೆಗಾಲದಲ್ಲಿ ಲಘು ವಾಹನಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಇಲ್ಲಿನ ಗ್ರಾಮಸ್ಥರು ಉಸ್ತುವಾರಿ ಸಚಿವ ಬೋಸರಾಜು ಅವರಿಗೆ ಮನವಿ ಮಾಡಿದರು. ಕರ್ತೋಜಿಯಲ್ಲಿ ಎರಡು ಕಡೆಗಳಲ್ಲಿ ಬರೆಕುಸಿತ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರವಾಗಿ ತಡೆಗೋಡೆ ನಿರ್ಮಿಸಿಕೊಡುವಂತೆ ಕೋರಿದರು.