ಮಡಿಕೇರಿ, ಜು. ೨೧ : ಖಾಸಗಿ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತ ಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ತಾ.೨೪ ರಂದು ವೀರಾಜಪೇಟೆ ಗಡಿಯಾರ ಕಂಬದ ಬಳಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಬೆಳಿಗ್ಗೆ ೧೦.೩೦ ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.