ಕೂಡಿಗೆ, ಜು. ೨೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗರಿ ಗ್ರಾಮದಲ್ಲಿರುವ ಕುಶಾಲನಗರ ಪುರಸಭೆಯ ಕಸ ವಿಲೇವಾರಿ ಘಟಕದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಸಿದ್ಧಗೊಳಿಸಿ, ಶೀಘ್ರವಾಗಿ ಕಸ ವಿಲೇವಾರಿ ಘಟಕದ ಸುತ್ತಲೂ ತಡೆಗೋಡೆ ನಿರ್ಮಾಣ ಮತ್ತು ನೂತನ ಯಂತ್ರೋಪಕರಣಗಳ ಅಳವಡಿಕೆಗೆ ಕ್ರಮ ಕೈಗೊಳ್ಳುವಂತೆ ಪುರಸಭೆಯ ಅಧಿಕಾರಿಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸೂಚನೆ ನೀಡಿದರು.

ಪುರಸಭೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಸ್ವಚ್ಛ ಭಾರತ ಯೋಜನೆಯ ಅಡಿಯಲ್ಲಿ ರೂ. ೩.೨೧. ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಘಟಕದಲ್ಲಿರುವ ಪಾರಂಪರಿಕ ತ್ಯಾಜ್ಯ ನಿರ್ವಹಣೆಗೆ ಸಂಬAಧಿಸಿದAತೆ ಹಣವು ಬಿಡುಗಡೆಗೊಂಡಿರುವ ಹಿನ್ನೆಲೆಯಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಅತಿ ಶೀಘ್ರವಾಗಿ ಪೂರ್ಣಗೊಳಿಸಿ, ತ್ಯಾಜ್ಯವನ್ನು ನಿರ್ವಹಣೆ ಮಾಡುವ ಕಾರ್ಯವನ್ನು ಪೂರ್ಣಗೊಳಿಸಲು ಸಭೆಯಲ್ಲಿ ಸಂಬAಧಿಸಿದ ಅಧಿಕಾರಿಗೆ ನಿರ್ದೇಶಿಸಿದರು.

ಕಸ ವಿಲೇವಾರಿ ಘಟಕದ ಅಭಿವೃದ್ಧಿಗೆ ಪೂರಕವಾದ ವಿವಿಧ ಯೋಜನೆಯ ಕಾಮಗಾರಿಗಳನ್ನು ಮತ್ತು ನೂತನ ಅಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳ ಅಳವಡಿಕೆಯ ಯೋಜನಾ ಕ್ರಮವನ್ನು ಬಹುಮುಖ್ಯವಾಗಿ ಕೈಗೊಳ್ಳುವ ಮೂಲಕ ಭುವನಗರಿ ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ಕ್ರಮ ವಹಿಸುವಂತೆ ಸಭೆಯಲ್ಲಿ ತಿಳಿಸಿದರು.

ಭುವನಗರಿ ಗ್ರಾಮಸ್ಥರ ಮನವಿ ಮೇರೆಗೆ ಕಸ ವಿಲೇವಾರಿ ಘಟಕದಲ್ಲಿ ನೂತನ ತಂತ್ರಜ್ಞಾನದ ಯಂತ್ರೋಪಕರಣಗಳ ಅಳವಡಿಕೆ, ಕಸ ವಿಂಗಡಣೆ ಮೂಲಕ ಯಾವುದೇ ರೀತಿಯ ದುರ್ವಾಸನೆ, ರೋಗ ರುಜಿನಗಳು ಬಾರದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಸೂಚನೆ ನೀಡಿದರು.