ಕೂಡಿಗೆ, ಜು. ೨೦: ತೊರೆನೂರು, ಹೆಬ್ಬಾಲೆ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಮನೆಗಳ ಗೋಡೆ ಕುಸಿತಗೊಂಡ ಸ್ಥಳಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತರಿಗೆ ಆಹಾರ ಕಿಟ್ ವಿತರಿಸಿ ಪರಿಹಾರವನ್ನು ನೀಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಕುಮಾರಿ, ಸಹಕಾರ ಸಂಘದ ನಿರ್ದೇಶಕ ಕೆ.ಎಸ್. ಕೃಷ್ಣಗೌಡ, ಜಗದೀಶ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ನಿಂಗಜಮ್ಮ, ಶುಂಠಿ ಶೇಖರ್, ಪ್ರಮುಖರಾದ ಲೋಕೇಶ್, ತೋಟೇಶ್, ದಿನೇಶ್, ಕಂದಾಯ ಇಲಾಖೆ ನಿರೀಕ್ಷಕ ಸಂತೋಷ್, ಲೆಕ್ಕಾಧಿಕಾರಿ ಫೀರ್ ಮಹಮ್ಮದ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ಸ್ಥಳಾಂತರಕ್ಕೆ ಸೂಚನೆ

ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಸೇತುವೆಯ ಸಮೀಪದ ಹಾರಂಗಿ ನದಿ ದಂಡೆಯ ಸಮೀಪದಲ್ಲಿರುವ ಮನೆಗಳ ಮುಂಭಾಗದ ದಂಡೆಯು ನದಿಯ ನೀರಿನ ಸೆಳೆತಕ್ಕೆ ಕುಸಿದಿದ್ದು ಶಾಸಕ ಡಾ. ಮಂತರ್‌ಗೌಡ ಭೇಟಿ ನೀಡಿ ಪರಿಶೀಲಿಸಿದರು. ನಂತರ ನದಿ ದಂಡೆಯ ಸಮೀಪದಲ್ಲೇ ವಾಸಿಸುತ್ತಿರುವ ಲಕ್ಷಿö್ಮ ಎಂಬವರ ಮನೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬದವರನ್ನು ಬೇರೆಡೆಗೆ ಸ್ಥಳಾಂತರಿಸುವAತೆ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.

ಹಾರಂಗಿ ನದಿ ದಂಡೆಯ ಸಮೀಪದಲ್ಲಿರುವ ಲಕ್ಷಿö್ಮ ಎಂಬವರ ಮನೆಯ ಮುಂಭಾಗದ ದಂಡೆಯು ಕುಸಿತವಾಗಿರುವ ಹಿನ್ನೆಲೆಯಲ್ಲಿ ಆ ಕುಟುಂಬವನ್ನು ಸ್ಥಳಾಂತರ ಮಾಡುವುದರ ಜೊತೆಗೆ ಕಡು ಬಡತನದಲ್ಲಿರುವ ಮತ್ತು ನದಿ ಅಂಚಿನಲ್ಲಿರುವ ಕುಟುಂಬಕ್ಕೆ ಶಾಶ್ವತವಾಗಿ ಮನೆಯ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕೂಡು ಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿ ಒದಗಿಸುವಂತೆ ಶಾಸಕರು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸದಸ್ಯ ಮಂಜುನಾಥ ಗುಂಡೂರಾವ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಕೂಡಿಗೆ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್, ಅರುಣ್ ರಾವ್, ವಿಕ್ಟರ್ ಸೋನ್, ಸೋಮಶೇಖರ್, ಕಂದಾಯ ಪರಿವೀಕ್ಷಕ ಸಂತೋಷ್, ಅಭಿವೃದ್ಧಿ ಅಧಿಕಾರಿ ಸಂತೋಷ್, ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.(ಮೊದಲ ಪುಟದಿಂದ)

ಕೂಡಿಗೆ, ಜು. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಪುಷ್ಪಾ ಎಂಬವರ ಮನೆಯ ಗೋಡೆ ಮಳೆಯಿಂದಾಗಿ ಕುಸಿತಗೊಂಡ ಸ್ಥಳಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಆಹಾರ ಕಿಟ್ ವಿತರಣೆ ಮಾಡಿದರು.

ಈ ಸಂದರ್ಭ ಗ್ಯಾರಂಟಿ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸದಸ್ಯ ಮಂಜುನಾಥ ಗುಂಡೂರಾವ್, ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ನಿರೀಕ್ಷಕ ಸಂತೋಷ್, ಲೆಕ್ಕಾಧಿಕಾರಿ ಗುರುದರ್ಶನ್, ಗ್ರಾಮಸ್ಥರಾದ ಸುನೀಲ್, ಕೃಷ್ಣೇಗೌಡ, ಚೇತನ್, ಖತೀಜಾ, ಸೇರಿದಂತೆ ಇತರರು ಹಾಜರಿದ್ದರು.