ಮಡಿಕೇರಿ, ಜು. ೨೦: ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿAದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟಿçÃಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ನೀಡುವ ಸಂಬAಧ ತಾಲೂಕುವಾರು ಮೌಲ್ಯಮಾಪನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ವಿಶೇಷಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಈ ಶಿಬಿರಕ್ಕೆ ಬಂದು ಹೋಗಲು ಅನಾನುಕೂಲವಾಗುವುದರಿಂದ ಮೌಲ್ಯಮಾಪನ ಶಿಬಿರವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ. ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.