ಕುಶಾಲನಗರ, ಜು. ೨೧: ರಾಜ್ಯ ರಸ್ತೆ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಸಯ್ಯದ್ ಮುಜೀಬ್ ಒತ್ತಾಯಿಸಿದ್ದಾರೆ.
ಕುಶಾಲನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಹಲವು ವರ್ಷಗಳಿಂದ ಓಲಾ, ಉಬರ್, ಸೆಲ್ಫ್ ಡ್ರೆöÊವಿಂಗ್ ವಾಹನಗಳಿಂದ ತಮ್ಮ ಕಾಯಕಕ್ಕೆ ತೊಂದರೆ ಉಂಟಾಗಿದೆ. ಇದೀಗ ಉಚಿತ ಸಾರಿಗೆ ವ್ಯವಸ್ಥೆಗಳಿಂದ ತಮ್ಮ ಜೀವನ ಸಾಗಿಸಲು ಧಕ್ಕೆ ಉಂಟಾಗಿದೆ.
ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ. ಈ ನಿಟ್ಟಿನಲ್ಲಿ ತಾ. ೨೩ ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡಲಾಗುವುದು ಎಂದರು. ಈ ಸಂದರ್ಭ ನಡೆದ ಸಭೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಎ. ಚಂದ್ರು, ಪ್ರಧಾನ ಕಾರ್ಯದರ್ಶಿ ಸೈಯದ್ ರಿಯಾಜ್, ಸಂಘಟನಾ ಕಾರ್ಯದರ್ಶಿ ಬೆಳ್ಳುಳ್ಳಿ ಮಂಜು, ತಾಲೂಕು ಪ್ರಮುಖರಾದ ಮುರಳಿ, ರವಿ, ಬಶೀರ್, ಫಯಾಜ್ ಮತ್ತಿತರರು ಇದ್ದರು.