ಸೋಮವಾರಪೇಟೆ, ಜು.೨೧ : ಜಿಲ್ಲೆಯಲ್ಲಿ ಮಹಾಮಳೆಯಿಂದ ಎದುರಾಗಿರುವ ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ತುರ್ತು ಪರಿಹಾರ ಸೇರಿದಂತೆ ಇನ್ನಿತರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅಭಯ ನೀಡಿದರು.

ಮಡಿಕೇರಿ ಕ್ಷೇತ್ರದ ಮುಕ್ಕೊಡ್ಲು, ಐಗೂರು, ಮಲ್ಲಳ್ಳಿ ಜಲಪಾತ ಬಳಿ ಸೇತುವೆ ಸೇರಿದಂತೆ ಇನ್ನಿತರ ಮಳೆಹಾನಿ ಪ್ರದೇಶ ಹಾಗೂ ಮಾದಾಪುರ ಬಳಿಯ ಜಂಬೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರ ಕುಂದುಕೊರತೆ ಆಲಿಸಿದ ನಂತರ ಸೋಮವಾರಪೇಟೆಯ ನಿರೀಕ್ಷಣಾ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೊಡಗಿನಲ್ಲಿ ಮಳೆಯಿಂದಾಗಿ ಸರ್ಕಾರಿ ಸೇರಿದಂತೆ ಖಾಸಗಿ ಪ್ರದೇಶದಲ್ಲಿ ಸಾಕಷ್ಟು ಹಾನಿಯಾಗಿದೆ. ಮನೆ, ರಸ್ತೆ, ಸೇತುವೆ, ತಡೆಗೋಡೆ, ವಿದ್ಯುತ್ ಕಂಬ ಹಾಗೂ ಪರಿವರ್ತಕಗಳು, ಬೆಳೆ ಹಾನಿ ಹೀಗೆ ಮಳೆಯಿಂದ ವಿವಿಧ ರೀತಿಯ ಹಾನಿಯಾಗಿದ್ದು, ಈ ಸಂಬAಧ ನಷ್ಟದ ಅಂದಾಜು ಮಾಡಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ವರದಿ ನೀಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು.

ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಬಳಿ ಈಗಾಗಲೇ ೩೦ ಕೋಟಿ ರೂ. ಇದ್ದು, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹಣದ ಕೊರತೆ ಇಲ್ಲ ಎಂದು ಸಚಿವರು ಹೇಳಿದರು. ತುರ್ತು ಕಾರ್ಯಗಳಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಕೊಡಗಿನ ಜನತೆ ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಜಿಲ್ಲೆಯ ಜನತೆಯ ಜೊತೆಗಿದ ಎಂದು ಭರವಸೆ ನೀಡಿದರು.

ಮನೆ ಹಾನಿ ಸಂಬAಧ ಎನ್‌ಡಿಆರ್‌ಎಫ್ ನಿರ್ದೇಶನದಂತೆ ಕ್ರಮವಹಿಸಲಾಗುವುದು. ಸಂತ್ರಸ್ತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಹರಿಸಲಾಗುವುದು. ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಸರ್ಕಾರದಿಂದ ಆಗಬೇಕಿರುವ ಕೆಲಸಗಳನ್ನು ಮುಖ್ಯಮಂತ್ರಿ ಅವರ ಗಮನ ಸೆಳೆಯಲಾಗುವುದು. ಪ್ರವಾಹದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಮನೆ ನಿರ್ಮಾಣ ಹಾಗೂ ಜಂಬೂರು ಗ್ರಾಮದಲ್ಲಿ ಅಗತ್ಯ ಮೂಲ ಸೌಲಭ್ಯ ಸೇರಿದಂತೆ ಹಲವು ಯೋಜನೆಗಳಿಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ವಿವರಿಸಿದರು.

ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನೂ ಮುಂದಿನ ದಿನಗಳಲ್ಲಿಯೂ ಮಳೆ ಇರುವುದರಿಂದ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜನತೆಯೂ ಎಚ್ಚರಿಕೆಯಿಂದ ಇರಬೇಕು ಎಂದು ಬೋಸರಾಜು ಅವರು ಮನವಿ ಮಾಡಿದರು. ರಾಜ್ಯದಲ್ಲಿ ೩ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಪ್ರಾಕೃತಿಕ ವಿಕೋಪ ಎದುರಿಸಲು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಸರ್ಕಾರ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನೂ ೨೦೦ ಕೋಟಿ ರೂ ಬಿಡುಗಡೆ ಮಾಡಲಿದೆ ಎಂದ ಸಚಿವರು, ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಗೆ ಆಗಬೇಕಿರುವ ಕೆಲಸಗಳ ಸಂಬAಧ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ, ಪುನರ್ವಸತಿ ಹಾಗೂ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ, ಜಂಬೂರು ಗ್ರಾಮದ ನಿವಾಸಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುವುದು. ಜಂಬೂರಿನಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಶೀಘ್ರ ಈ ಸಮಸ್ಯೆ ಪರಿಹರಿಸಲಾಗುವುದು. ಜಂಬೂರಿನಲ್ಲಿ ಒಳಚರಂಡಿ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿಲ್ಲ, ಹಾಗಾಗಿ ಸಮಸ್ಯೆ ಆಗಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಂಬೂರು ಗ್ರಾಮದಲ್ಲಿ ಇನ್ನೂ ಖಾಲಿ ಇರುವ ಮನೆ ಹಾಗೂ ಸಂತ್ರಸ್ತರಲ್ಲದವರೂ ವಾಸ ಮಾಡುತ್ತಿರುವ ಬಗ್ಗೆ ಗಮನ ಸೆಳೆದ ಸಂದರ್ಭ ಪ್ರತಿಕ್ರಿಯಿಸಿದ ಅವರು, ಈ ಸಂಬAಧ ಉಪ ವಿಭಾಗಾಧಿಕಾರಿ ಅವರು ಫಲಾನುಭವಿಗಳ ಪಟ್ಟಿ ಪರಿಶೀಲಿಸಿ ವರದಿ ನೀಡಲಿದ್ದಾರೆ ಎಂದು ಶಾಸಕರು ವಿವರಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಳೆ ಹಾನಿ ಬಗ್ಗೆ ಮಾಹಿತಿ ನೀಡಿ, ಎನ್‌ಡಿಆರ್‌ಎಫ್ ನಿರ್ದೇಶನದಂತೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶೀಲ್ದಾರ್ ನವೀನ್‌ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಲಕ್ಷö್ಮಣ, ಕೆ.ಬಿ.ಶಾಂತಪ್ಪ, ಕೆ.ಎಂ. ಲೋಕೇಶ್, ಯಾಕೂಬ್ ಮತ್ತಿತರರು ಇದ್ದರು.