ಮೈಸೂರು, ಜು. ೨೨ : ವಾರಣಾಸಿಯಲ್ಲಿ ಗಂಗಾ ಆರತಿ ನಡೆಸುವಂತೆ ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗೂ ಅಧಿಕಾರಿಗಳು ಸೇರಿದ ೨೦ ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕೆಆರ್ ಎಸ್ ಅಣೆಕಟ್ಟು ವೀಕ್ಷಣೆ ನಂತರ ಮಾತನಾಡಿ, ಗಂಗಾ ಆರತಿ ಕಾರ್ಯಕ್ರಮವನ್ನು ಅಧ್ಯಯನ ಮಾಡಿ, ಒಂದು ತಿಂಗಳೊಳಗೆ ವರದಿ ನೀಡಲು ಸೂಚಿಸಿದ್ದೇನೆ. ಅದೇ ಮಾದರಿಯಲ್ಲಿ ವಿನೂತನವಾಗಿ ‘ಕಾವೇರಿ ಆರತಿಯನ್ನು ಕಾವೇರಿ ನೀರಾವರಿ ನಿಗಮ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಹಯೋಗದಲ್ಲಿ ಶೀಘ್ರ ನೆರವೇರಿಸುತ್ತೇವೆ ಎಂದು ಹೇಳಿದರು. .