ಕೂಡಿಗೆ, ಜು. ೨೨: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೪-೨೫ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಅಧ್ಯಕ್ಷತೆಯಲ್ಲಿ ತಾ.೨೩ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಹೊಸಪಟ್ಟಣದ ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೆಗೌಡ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.