ಮಡಿಕೇರಿ, ಜು. ೨೨: ಜಿಲ್ಲಾ ಬಿಜೆಪಿ ವತಿಯಿಂದ ಗುರುಪೂರ್ಣಿಮಾ ಅಂಗವಾಗಿ ಗುರುವಂದನಾ ಕಾರ್ಯಕ್ರಮವನ್ನು ಹಿರಿಯ ವೈದ್ಯ ಬಿಜೆಪಿಯ ಹಿರಿಯ ನಾಯಕ ಡಾ. ಪಾಟ್ಕರ್ ದಂಪತಿಗೆ ಗುರು ವಂದನೆಗಳನ್ನು ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಬಿಜೆಪಿಯ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಕೆ. ಜಿ. ಬೋಪಯ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್‌ಕುಮಾರ್, ಜಿಲ್ಲಾ ಉಪಾಧ್ಯಕ್ಷ ಮನು ಮಂಜುನಾಥ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಜಿಲ್ಲಾ ಖಜಾಂಚಿ ಕನ್ನಂಡ ಸಂಪತ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಗೀತ, ವೈಭವಿ, ಕೀರ್ತಿ ಹಾಜರಿದ್ದರು.