ಸಿದ್ದಾಪುರ. ಜು. ೨೨: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿದ್ದಾಪುರದ ಸಿಪಿಐಎಂ ಪಕ್ಷದ ವತಿಯಿಂದ ಸಿದ್ದಾಪುರದ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಪಕ್ಷದ ಜಿಲ್ಲಾ ಮುಖಂಡ ಡಾ. ದುರ್ಗಾ ಪ್ರಸಾದ್ ಮಾತನಾಡಿ ಸಿದ್ದಾಪುರ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಕಸ ವಿಲೇವಾರಿಯನ್ನು ಸಮರ್ಪಕವಾಗಿ ಮಾಡದೆ ದೂರದ ಊರುಗಳಿಂದ ಬರುತ್ತಿರುವ ಪ್ರವಾಸಿಗರಿಗೆ ರಸ್ತೆಗಳಲ್ಲಿ ಕಸಗಳು ತ್ಯಾಜ್ಯಗಳು ಸ್ವಾಗತಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಮಾತನಾಡಿ ಪಂಚಾಯಿತಿಯ ನಿರ್ಲಕ್ಷö್ಯದಿಂದಾಗಿ ಪಟ್ಟಣ ವ್ಯಾಪ್ತಿಯಲ್ಲಿ ಕಸ ತ್ಯಾಜ್ಯಗಳು ತುಂಬಿವೆ. ಪಂಚಾಯಿತಿ ಶುಚಿತ್ವ ಕಾಪಾಡುವಲ್ಲಿ ವಿಫಲವಾಗಿದೆ. ಇದರಿಂದ ಡೆಂಗ್ಯು ಪ್ರಕರಣಗಳು ಹೆಚ್ಚಾಗಿ ಆಸ್ಪತ್ರೆಗೆ ತೆರಳಿದ್ದ ಸಂದರ್ಭ ವೈದ್ಯರುಗಳ ಕೊರತೆಯೂ ಕೂಡ ಕಂಡುಬAದಿತು ಎಂದು ದೂರಿದರು. ಸಿಪಿಐಎಂ ಪಕ್ಷದ ಸದಸ್ಯ ಅನಿಲ್ ಕುಟ್ಟಪ್ಪ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಪದಾಧಿಕಾರಿಗಳಾದ ಎನ್. ಡಿ. ಕುಟ್ಟಪ್ಪ, ವೈಜು, ಅಬ್ದುಲ್ ರಹಮಾನ್, ಇನ್ನಿತರರು ಹಾಜರಿದ್ದರು.