ಕೋವರ್‌ಕೊಲ್ಲಿ ಇಂದ್ರೇಶ್

ಬೆAಗಳೂರು, ಆ. ೪: ಪಶ್ಚಿಮಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ತಾ.೫ರಿಂದಲೇ (ಇಂದಿನಿAದ) ಪ್ರಾರಂಭಗೊಳ್ಳಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಚಿವರು, ರಾಜ್ಯದ ೧೦ ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಘೋಷಿಸಿದ್ದಾರೆ.

ಈ ಕಾರ್ಯಪಡೆಯ ನೇತೃತ್ವವನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ವಹಿಸಲಾಗಿದ್ದು. ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ ೨೦೧೫ರ ನಂತರ ಆಗಿರುವ ಒತ್ತುವರಿಗೆ ಸಂಬAಧಿಸಿ ದಂತೆ ತೆರವು ಕಾರ್ಯಾ ಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿ.ಸಿ.ಎಫ್.ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ ೬೪ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ ೬೪ಎ ಪ್ರಕರಣ ಗಳನ್ನು ಶೀಘ್ರ ಇತ್ಯರ್ಥ ಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಈಗಾಗಲೇ ನ್ಯಾಯಾಲಯ ದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾ ಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಲಾಗಿದೆ. ಮೊದಲಿಗೆ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವು ದಿಲ್ಲ. ಇಂಥ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ ೯೦ ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೂ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ. ವಯನಾಡ್ ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳಿಂದ ಇದ್ದ ಗುಡ್ಡವೇ ಕಣ್ಮರೆಯಾಗಿದೆ. ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಕಳವಳ ವ್ಯಕ್ತಪಡಿಸಿದರು.