ಭಾಗಮಂಡಲ, ಆ. ೪: ಇಲ್ಲಿನ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಭಾನುವಾರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ಜರುಗಿತು.

ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ, ಭಗಂಡೇಶ್ವರ ದೇವಾಲಯಗಳಿಗೆ ಪೂಜೆ ಬಳಿಕ ಬಾಳೆದಿಂಡಿನಿAದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಮೂರು ಬಾರಿ ಪ್ರದಕ್ಷಿಣೆ ಬರಲಾಯಿತು. ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ವಿಸರ್ಜಿಸಲಾಯಿತು. ಪೊಲಿಂಕಾನ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.

ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಗಂಡೇಶ್ವರ ದೇವಾಲಯದ ಎಲ್ಲಾ ದೇವರಿಗೆ ಪೂಜೆ ಪುನಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರವನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ವಿಸರ್ಜಿಸುವ ಪದ್ಧತಿ ಹಿಂದಿನಿAದಲೂ ನಡೆದುಕೊಂಡು ಬಂದಿದೆ ಎಂದರು.

ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿAದ ಅಲಂಕರಿಸಿದ ಮಂಟಪಕ್ಕೆ ಪೂಜೆ ನೆರವೇರಿಸಿ ಪೊಲಿಂಕಾನ ಉತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ವಾಡಿಕೆ. ನಾಡಿನ ಜೀವನದಿ ಕಾವೇರಿಯ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದಾಗಿದೆ. ವಿಶೇಷವಾಗಿ ಅಲಂಕರಿಸಿ ಕಾವೇರಿ ಮಾತೆಗೆ ಬೇಕಾದ ವಸ್ತುಗಳನ್ನು ಬಾಗಿನ ಅರ್ಪಿಸುವ ಕಾರ್ಯಕ್ರಮವು ಪೊಲಿಂಕಾನದ ವಿಶೇಷ ಪೂಜಾ ಕಾರ್ಯಕ್ರಮವಾಗಿದೆ ಎಂದು ಮಾಹಿತಿ ಒದಗಿಸಿದರು.

ಉತ್ಸವದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ್, ತಲಕಾವೇರಿ ದೇವಾಲಯದ ತಕ್ಕರಾದ ಕೋಡಿ ಮೋಟಯ್ಯ,ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಅಪ್ಪಾಜಿ,ಸ್ಥಳೀಯ ಪ್ರಮುಖರು ಇದ್ದರು.

-ಸುನಿಲ್ ಕುಯ್ಯಮುಡಿ