ಕೂಡಿಗೆ, ಆ. ೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗೆ ಕಲ್ಯಾಣ ಗ್ರಾಮದ ರಾಮಕೃಷ್ಣ ಅವರ ಮನೆ ಗೋಡೆ ಹಾಗೂ ಛಾವಣಿ ಮಳೆ ಗಾಳಿಯಿಂದ ಕುಸಿದು ಭಾರೀ ನಷ್ಟ ಉಂಟಾಗಿದೆ. ಸ್ಥಳಕ್ಕೆ ಕುಶಾಲನಗರ ತಾಲೂಕು ತಹಶೀ ಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.