ಮಡಿಕೇರಿ, ಆ. ೫: ರಾಜ್ಯದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಹಂಚಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಗೊಂಡಿದ್ದು, ಈ ಪೈಕಿ ಮಡಿಕೇರಿ ನಗರಸಭೆಯ ೨ನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳಾ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲು, ವೀರಾಜಪೇಟೆ ಪುರಸಭೆಗೆ ಅಧ್ಯಕ್ಷ ಸ್ಥಾನಕ್ಕೆ ಬಿಸಿಬಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ಸಿ. ಮಹಿಳೆ, ಕುಶಾಲನಗರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ಘೋಷಿಸಲಾಗಿದೆ.