ಕಡಂಗ, ಆ. ೫: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ, ಅರಪಟ್ಟು, ಪೊದ್ದಮಾನಿ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಭಯ ಭೀತರಾಗಿದ್ದಾರೆ.
ಈ ಭಾಗದ ಕಾಫಿ ತೋಟಗಳಲ್ಲಿ ೫ ಕಾಡಾನೆ ಬೀಡುಬಿಟ್ಟು ದಾಂಧಲೆ ನಡೆಸುತ್ತಿವೆ. ಕಾಫಿ ಬೆಳೆಗಾರರಿಗೆ ಹಾಗೂ ತೋಟ ಕಾರ್ಮಿಕರಿಗೆ ಸಮಸ್ಯೆಯನ್ನುಂಟುಮಾಡುತ್ತಿವೆ.
ಕಳೆದ ವಾರ ಸುರಿದ ಭಾರೀ ಮಳೆಯಿಂದಾಗಿ ಭಾರೀ ಪ್ರಮಾಣದ ನಷ್ಟ ಉಂಟಾಗಿದ್ದು, ಇದೀಗ ಕಾಡಾನೆಯಿಂದ ಕೃಷಿಗೆ ಹಾನಿ ಉಂಟಾಗುತ್ತಿದೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅವರ ತೋಟದಲ್ಲಿ ಆನೆಗಳು ಬೀಡು ಬಿಟ್ಟಿದ್ದು, ಕಾಡಾನೆ ದಾಳಿಯಿಂದ ಸುತ್ತಮುತ್ತಲಿನ ನಂಬಿಯಪAಡ ಕುಟುಂಬದವರು ಕೂಡ ಭಯಭೀತರಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನೆಲ್ಲಚಂಡ ಕಿರಣ್ ಕಾರ್ಯಪ್ಪ ಕಾಡನೆಗಳನ್ನು ಅರಣ್ಯ ಇಲಾಖೆಯವರು ಕಾಡಿಗೆ ಅಟ್ಟಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಕಡಂಗ ಸುತ್ತಮುತ್ತಲಿನ ಭಾಗದಲ್ಲಿ ಕಾಡನೆಗಳ ಸಂಚಾರದಿAದ ರಾತ್ರಿ ವೇಳೆಯಲ್ಲಿ ಜನರು ಓಡಾಟ ನಡೆಸಲು ಹಿಂದೇಟು ಹಾಕುತ್ತಿದ್ದಾರೆ.