x

ನಾಪೋಕ್ಲು, ಆ. ೫: ಬೈಕ್ ಮತ್ತು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರಿಗೆ ಗಾಯಗಳಾದ ಘಟನೆ ಪಟ್ಟಣದಲ್ಲಿ ನಡೆದಿದೆ.

ಕವನ್ ಎಂಬಾತ ಚಲಾಯಿಸುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದ ನಂತರ ಪಾದಚಾರಿ ಬಲ್ಲಮಾವಟಿ ಗ್ರಾಮದ ಬೊಟ್ಟೋಳಂಡ ಸದಾ ಎಂಬವರಿಗೆ ಗುದ್ದಿದ್ದು ಕಾಲು ಮುರಿದಿದೆ.

ಭಾನುವಾರ ಸಂಜೆ ಅಪಘಾತ ನಡೆದಿದ್ದು ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದಾ ಅವರಿಗೆ ಮಡಿಕೇರಿಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.