ಮಡಿಕೇರಿ, ಆ. ೫: ಮುಂದಿನ ಪೀಳಿಗೆಗೆ ಆಸ್ತಿ, ಅಂತಸ್ತು ಸಂಪಾದಿಸುವದ ಕ್ಕಿಂತ ಉತ್ತಮ ಆರೋಗ್ಯ ಒದಗಿಸುವುದು ಮುಖ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು.
ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರುಣಾ ಟ್ರಸ್ಟ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಿದ ಆ್ಯಂಟಿ ಮೈಕ್ರೋಬಿಯಲ್ ಸ್ಟೀವರ್ಡ್ ಶಿಪ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಇಂದಿನ ಪರಿಸ್ಥಿತಿಯಲ್ಲಿ ರಾಸಾಯನಿಕ ಬೆರೆಸಿದ ಆಹಾರಗಳನ್ನು ಸೇವಿಸುತ್ತಿದ್ದು ಇದು ವಿಷೇಶವಾಗಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರುತ್ತಿದೆ. ಇಂತಹ ದುಷ್ಪರಿಣಾಮಗಳನ್ನು ತಡೆಗಟ್ಟಲು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತಿರುವುದು ಮತ್ತು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮನುಷ್ಯ ಪರಿಸರಕ್ಕೆ ಹೊಂದಿಕೊAಡು ಜೀವನ ನಡೆಸಬೇಕು ಎಂದು ಕಿವಿ ಮಾತು ಹೇಳಿದರು.
ಫ್ಲೋರಿಡಾ ಯೂನಿವರ್ಸಿಟಿ ಮೆಡಿಸನ್ ವಿಭಾಗದ ಮುಖ್ಯಸ್ಥ ಡಾ. ಕಲಿಯಾಟಂಡ ಜೀವನ್ ಮಾತನಾಡಿದರು.
ಕಾರ್ಯಕ್ರಮದ ಆಯೋಜಕರಾದ ಗಣೇಶ್, ಡಾ. ನೈರಿನ್ ಶೇಖ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ನವೀನ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪಂಕಜ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಕರುಣಾ ಟ್ರಸ್ಟ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್, ಕೀಕಿರ ವಸಂತ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಸ್ವಯಂ ಸೇವಕರು, ಸ್ಥಳೀಯರು ಉಪಸ್ಥಿತರಿದ್ದರು. ಪ್ರೊಫೆಸರ್ ಚಂದ್ರಶೇಖರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.