ಬೆಂಗಳೂರು, ಆ. ೫: ರಾಜ್ಯದ ೧೦ ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ ೨೪ ಗಂಟೆಯಲ್ಲಿ ನೂತನ ಕಾರ್ಯಪಡೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. ೨೯ರಲ್ಲಿ ೧೭ ಎಕರೆ ೧೭ ಗುಂಟೆ, ಹಲಸೂರು ಸರ್ವೆ ನಂ. ೫೫ರಲ್ಲಿ ೧೩ ಎಕರೆ ೩೮ ಗುಂಟೆ ಹಾಗೂ ತನುಡಿ ಸರ್ವೆ ನಂ. ೯, ೨೧, ೨೨,೨೩, ೭೨ಮತ್ತು ೯೭ರಲ್ಲಿ ಒಟ್ಟು ೩೬ ಎಕರೆ ಸೇರಿ ಒಟ್ಟು ೬೯ ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ.

ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ.