ಬಾಂಗ್ಲಾದೇಶದಲ್ಲಿ ಮುಂದುವರೆದ ಪ್ರತಿಭಟನೆ-ಹಿಂಸಾಚಾರ
ಢಾಕಾ, ಆ. ೬: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರ ಮುಂದುವರೆದಿದ್ದು, ಅವಾಮಿ ಲೀಗ್ ಪಕ್ಷದ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿರುವ ಪ್ರತಿಭಟನಾಕಾರರು ಪಿಠೋಪಕರಣ ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ. ಬಾಂಗ್ಲಾದೇಶದಿAದ ಶೇಖ್ ಹಸೀನಾ ಭಾರತಕ್ಕೆ ಪರಾರಿಯಾದ ಬಳಿಕವೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು ನಿನ್ನೆ ಕೂಡ ಕನಿಷ್ಟ ೮೪ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಪ್ರಮುಖವಾಗಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ ಎಂದು ಹೇಳಲಾಗಿದ್ದು, ರಾಜಧಾನಿ ಢಾಕಾ, ಜೆಸ್ಸೋರ್ನಲ್ಲಿ ಹಿಂಸಾಚಾರ ವ್ಯಾಪಕವಾಗಿವೆ ಎಂದು ಹೇಳಲಾಗಿದೆ. ಅವಾಮಿ ಲೀಗ್ ನಾಯಕ ಶಹೀನ್ ಚಕ್ಲಾದಾರ್ ಅವರಿಗೆ ಸೇರಿದ ಜೆಸ್ಸೋರ್ನಲ್ಲಿರುವ ಹೊಟೇಲ್ಗೆ ನುಗ್ಗಿದ ಪ್ರತಿಭಟನಾಕಾರರು ಕಚೇರಿ ಧ್ವಂಸ ಮಾಡಿ ಕಿಟಕಿ ಗಾಜುಗಳನ್ನು ಪುಡಿಗಟ್ಟಿದ್ದಾರೆ. ಅಲ್ಲದೆ ಇಡೀ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಅವಾಮಿ ಲೀಗ್ ಪಕ್ಷದ ಕಚೇರಿಗಳು ಮಾತ್ರವಲ್ಲದೇ ಸುದ್ದಿವಾಹಿನಿಗಳ ಕಚೇರಿಗಳ ಮೇಲೂ ಪ್ರತಿಭಟನಾಕಾರರು ದಾಳಿ ಮಾಡಿದ್ದಾರೆ. ಮತ್ತೊಂದೆಡೆ ಉದ್ರಿಕ್ತ ಪ್ರತಿಭಟನಾಕಾರರು ಪ್ರತಿಭಟನೆ ಹೆಸರಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದ್ದು ಕೈಗೆ ಸಿಕ್ಕ ವಸ್ತುಗಳನ್ನು ಲೂಟಿ ಮಾಡುತ್ತಿದ್ದಾರೆ. ರಾಜಧಾನಿ ಢಾಕಾ, ಚಿತ್ತಗಾಂಗ್ನಲ್ಲಿ ಆರು ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿರುವ ಉದ್ರಿಕ್ತರು ಕೈಗೆ ಸಿಕ್ಕ ಗನ್ಗಳು, ರೈಫಲ್ಗಳು, ಬುಲೆಟ್ಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ. ಇದು ಅಲ್ಲಿನ ಭದ್ರತೆ ಬಗ್ಗೆ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ.
ಕಾಂಗ್ರೆಸ್ನಿAದ ಜನಾಂದೋಲನ ಸಮಾವೇಶ
ಮಂಡ್ಯ, ಆ. ೬: ಬೆಲೆ ಏರಿಕೆ ಮತ್ತು ಆರ್ಥಿಕ ಅಸಮಾನತೆ ವಿರುದ್ಧ ರಾಹುಲ್ಗಾಂಧಿಯವರು ‘ಭಾರತ್ ಜೋಡೊ' ಪಾದಯಾತ್ರೆ ಮಾಡಿದರು. ನಾವು ಕಾವೇರಿ ನೀರಿಗಾಗಿ ಮತ್ತು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದೆವು. ಬಿಜೆಪಿ ಮತ್ತು ಜೆಡಿಎಸ್ನವರು, ಅವರೇ ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಮರ್ಶೆ ಮಾಡಿಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ. ನಿಮ್ಮದು ಪಾದಯಾತ್ರೆಯಲ್ಲ, ಪಾಪ ವಿಮೋಚನಾ ಯಾತ್ರೆ' ಎಂದು ಡಿ.ಕೆ. ಶಿವಕುಮಾರ್ ಕಟುವಾಗಿ ಟೀಕಿಸಿದರು. ನಗರದ ಮೈ ಶುಗರ್ ಮೈದಾನದಲ್ಲಿ ಕಾಂಗ್ರೆಸ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಜನಾಂದೋಲನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮೈತ್ರಿ ಪಕ್ಷಗಳು ಪಾದಯಾತ್ರೆ ಮಾಡುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ವಿರುದ್ಧ ಅಲ್ಲ. ಕಾಂಗ್ರೆಸ್ ಪಕ್ಷವನ್ನು ೧೩೬ ಸ್ಥಾನಗಳಲ್ಲಿ ಗೆಲ್ಲಿಸಿದ ಬಡವನರ ವಿರುದ್ಧ. ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ಕುಮಾರಣ್ಣ ಮತ್ತು ಯಡಿಯೂರಪ್ಪನವರೇ ನಿಮ್ಮ ಹಣೆಯಲ್ಲೇ ಬರೆದಿಲ್ಲ. ಅಶೋಕ್ ನಿನ್ನ ಕೈಯಲ್ಲಿ ಧಮ್ ಇಲ್ಲ. ನಿಮ್ಮ ಪಾದಯಾತ್ರೆಗೂ ಧಮ್ ಇಲ್ಲವೆಂದು ಛೇಡಿಸಿದರು.
ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
ನವದೆಹಲಿ, ಆ. ೬: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾಷ್ಟç ರಾಜಧಾನಿಯ ಪ್ರಮುಖ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ೯೬ ವರ್ಷದ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜುಲೈ ಮೊದಲ ವಾರದಲ್ಲಿಯೂ ಅಡ್ವಾಣಿ ಅವರನ್ನು ಈ ಆಸ್ಪತ್ರೆಗೆ ಕರೆತಂದು ಒಂದೆರಡು ದಿನಗಳ ಕಾಲ ನಿಗಾದಲ್ಲಿರಿಸಿ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು.
ಬಾಂಗ್ಲಾದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿಕಟ ಸಂಪರ್ಕ
ನವದೆಹಲಿ, ಆ. ೬: ನೆರೆಯ ರಾಷ್ಟç ಬಾಂಗ್ಲಾದೇಶ ರಾಜಕೀಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಭಾರತ ಸರ್ಕಾರವೂ ಅಲ್ಲಿನ ಪರಿಸ್ಥಿತಿಯ ಮೇಲೆ ಕಣ್ಣಿಟ್ಟಿದೆ. ಮಂಗಳವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬಾಂಗ್ಲಾದೇಶದ ಪರಿಸ್ಥಿತಿ ಕುರಿತು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಜನರು ಬೀದಿಗಿಳಿದಿದ್ದು ಹಿಂಸಾಚಾರ ನಡೆಸುತ್ತಿದ್ದಾರೆ. ಅಲ್ಲದೆ ಅಲ್ಲಿನ ಅಲ್ಪಸಂಖ್ಯಾತ ಸಮುದಾಯದ ಹಿಂದೂಗಳನ್ನು ಗುರಿಯಾಗಿಸಲಾಗಿದೆ ಎಂದು ವಿದೇಶಾಂಗ ಸಚಿವರು ಹೇಳಿದರು. ಅಲ್ಪಸಂಖ್ಯಾತರ ಸ್ಥಿತಿಗತಿಗಳ ಮೇಲೆ ನಿಗಾ ಇಡಲಾಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದು, ಪರಿಸ್ಥಿತಿ ಹದಗೆಟ್ಟಿದೆ. ರಾಜೀನಾಮೆ ನಂತರ ಶೇಖ್ ಹಸೀನಾ ಅವರು ಭಾರತಕ್ಕೆ ಬರಲು ಅನುಮತಿ ಕೋರಿದ್ದರು ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿತ್ತು. ಈ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ. ಜೈಶಂಕರ್ ಮಾತನಾಡಿ, ಬಾಂಗ್ಲಾದೇಶದ ಪರಿಸ್ಥಿತಿ ಅಷ್ಟು ಭೀಕರವಾಗಿಲ್ಲ, ಹಿಂಸಾಚಾರ ಪೀಡಿತ ದೇಶದಿಂದ ೧೨,೦೦೦-೧೩,೦೦೦ ಭಾರತೀಯರನ್ನು ಸ್ಥಳಾಂತರಿಸುವ ಅಗತ್ಯವಿದೆ. ಅಲ್ಲಿ ೨೦ ಸಾವಿರ ಭಾರತೀಯ ಪ್ರಜೆಗಳಿದ್ದರು ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ. ಈ ಪೈಕಿ ಸುಮಾರು ೮ ಸಾವಿರ ಭಾರತೀಯರು ವಾಪಸಾಗಿದ್ದಾರೆ. ಬಾಂಗ್ಲಾದೇಶದಲ್ಲಿ ಉದ್ಭವಿಸುವ ಪರಿಸ್ಥಿತಿಯನ್ನು ನಮ್ಮ ಸರ್ಕಾರ ಸೂಕ್ಷö್ಮವಾಗಿ ಗಮನಿಸುತ್ತಿದೆ ಎಂದು ಎಸ್. ಜೈಶಂಕರ್ ಹೇಳಿದ್ದಾರೆ. ಪ್ರತಿಭಟನೆಯಲ್ಲಿ ೩೦೦ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಗೃಹಜ್ಯೋತಿ : ರೂ. ೮,೮೪೪ ಕೋಟಿ ಬಿಲ್ ಪಾವತಿ
ಬೆಂಗಳೂರು, ಆ. ೬: ಗೃಹ ಜ್ಯೋತಿ ಯೋಜನೆಯ ಸಮರ್ಪಕ ಮುಂದುವರಿಕೆಗಾಗಿ ರಾಜ್ಯದ ಆರು ವಿದ್ಯುತ್ ಸರಬರಾಜು ಕಂಪೆನಿಗಳ (ಎಸ್ಕಾಂ) ಖಾತೆಗಳಿಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ ರೂ. ೮,೮೪೪ ಕೋಟಿ ಹಣ ಪಾವತಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಮನೆಗಳಿಗೆ ನೀಡಲಾಗುವ ಶೂನ್ಯ ಬಿಲ್ಗಳಿಗೆ ಸರ್ಕಾರದ ವತಿಯಿಂದ ಪಾವತಿಸುತ್ತಿರುವ ಮೊತ್ತ ಇದಾಗಿದೆ. ಇಂಧನ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ೧,೭೦,೯೦,೬೮೧ ಗ್ರಾಹಕರು ಯೋಜನೆಗೆ ನೋಂದಾಯಿಸಿಕೊAಡಿದ್ದಾರೆ. ಅದರಲ್ಲಿ ಶೂನ್ಯ-ಬಿಲ್ ಪ್ರಯೋಜನವನ್ನು ೧.೬೦೨ ಕೋಟಿಗೆ ವಿಸ್ತರಿಸಲಾಗುತ್ತಿದೆ. ೧.೬೫ ಕೋಟಿ ಕುಟುಂಬಗಳು ಶೂನ್ಯ ಬಿಲ್ ಪಡೆಯುತ್ತವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಒಂದು ವರ್ಷದ ಯೋಜನೆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.