ಮಡಿಕೇರಿ, ಆ. ೬: ಮಡಿಕೇರಿ ನಗರಾಭಿ ವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕ ರಾಜೇಶ್ ಯಲ್ಲಪ್ಪ ಅವರನ್ನು ಆಡಳಿತ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾ ಯಿತು. ಈ ಸಂದರ್ಭ ಬ್ಯಾಂಕಿನ ಅಧ್ಯಕ್ಷ ಜಿ.ಎಂ. ಸತೀಶ್ ಪೈ, ಉಪಾಧ್ಯಕ್ಷ ಕೆ.ಆರ್. ನಾಗೇಶ್ ಮತ್ತು ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.