ಕುಶಾಲನಗರ, ಆ. ೭: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, ತಾಲೂಕು ಕಾರ್ಯಕಾರಿಣಿಯ ತುರ್ತು ಸಭೆಯು ಪಕ್ಷದ ಕಚೇರಿಯಲ್ಲಿ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಹಾಗೂ ವಲಯ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿರೋಧ ಪಕ್ಷಗಳು ಅನಗತ್ಯವಾಗಿ ನಡೆಸುತ್ತಿರುವ ಗೊಂದಲ ಹಾಗೂ ರಾಜ್ಯದ ರಾಜ್ಯಪಾಲರು ಅಸಂವಿಧಾನಿಕವಾಗಿ ತೋರುತ್ತಿರುವ ಧೋರಣೆಯ ವಿರುದ್ಧ ಆಗಸ್ಟ್ ೯ರಂದು ಮೈಸೂರಿನಲ್ಲಿ ಬೃಹತ್ ಜನಾಂದೋಲನ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಬ್ಲಾಕ್ ವ್ಯಾಪ್ತಿಯ ಎಲ್ಲಾ ಭಾಗಗಳಿಂದಲೂ ಕಾರ್ಯಕರ್ತರನ್ನು ಹಾಗೂ ಸಮಾನ ಮನಸ್ಕ ನಾಗರಿಕರನ್ನು ಕಾರ್ಯಕ್ರಮಕ್ಕೆ ತೆರಳುವ ಬಗ್ಗೆ ಚರ್ಚಿಸಲಾಯಿತು.