ಮಡಿಕೇರಿ, ಆ. ೬: ಸಾಂಪ್ರದಾಯಿಕ ನಾಟಿ ಓಟದೊಂದಿಗೆ ೩೨ನೇ ವರ್ಷದ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ತಾ. ೧೦ ರಂದು ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ. ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತೀ ವರ್ಷದಂತೆ ಈ ಬಾರಿಯೂ ಜಿಲ್ಲಾ ಪಂಚಾಯಿತಿ, ಕೊಡಗು ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದೆ. ಬೆಳಿಗ್ಗೆ ೯.೩೦ಕ್ಕೆ ಸ್ಪರ್ಧಾ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಹಗ್ಗಜಗ್ಗಾಟ, ಸಾರ್ವಜನಿಕ ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟ, ಸಾರ್ವಜನಿಕ ಮಹಿಳೆಯರ ಹಾಗೂ ಪ್ರೌಢಶಾಲಾ ಬಾಲಕಿಯರಿಗೆ ಜಂಟಿ ಥ್ರೋಬಾಲ್ ಪಂದ್ಯಾಟ, (ಈ ಎಲ್ಲಾ ವಿಭಾಗದ ಮೈದಾನ ಶುಲ್ಕ ರೂ. ೧೦೦೦ ಆಗಿರುತ್ತದೆ) ಪ್ರೌಢಶಾಲಾ ಬಾಲಕರ ವಿಭಾಗದ ಹಗ್ಗಜಗ್ಗಾಟ ನಡೆಯಲಿದೆ. ಕೆಸರುಗದ್ದೆ ಓಟದ ಸ್ಪರ್ಧೆಯಲ್ಲಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಪದವಿ ಕಾಲೇಜು ಬಾಲಕ - ಬಾಲಕಿಯರಿಗೆ ಪ್ರತ್ಯೇಕ ಓಟ ನಡೆಯಲಿದ್ದು, ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಮುಕ್ತ ಓಟದ ಸ್ಪರ್ಧೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಈ ಬಾರಿ ಕ್ರೀಡಾಕೂಟದ ಆಯೋಜಕರಿಗೆ ಪ್ರತ್ಯೇಕವಾಗಿ ಓಟದ ಸ್ಪರ್ಧೆ ಏರ್ಪಡಿಸ ಲಾಗಿದ್ದು, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ಸ್ಪರ್ಧೆ ನಡೆಯಲಿದೆ ಎಂದು ಸುಕುಮಾರ್ ತಿಳಿಸಿದರು. ಕ್ರೀಡಾಕೂಟದ ಉದ್ಘಾಟನೆ ಯನ್ನು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಮಾಡಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಬೋಜೇಗೌಡ, ಹಾಕತ್ತೂರು ಗ್ರಾ.ಪಂ. ಅಧ್ಯಕ್ಷ ಬಿ.ಕೆ. ಯತೀಶ್, ಮೇಕೇರಿ ಗ್ರಾ.ಪಂ. ಅಧ್ಯಕ್ಷ ಪೂಜಾರಿರ ರಕ್ಷಿತ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಆನಂದ ಪ್ರಕಾಶ ಮೀನಾ ಭಾಗವಹಿಸಲಿದ್ದಾರೆ. ಕ್ರೀಡಾಕೂಟದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು - ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಹಾಕತ್ತೂರು ಗ್ರಾ.ಪಂ. ಉಪಾಧ್ಯಕ್ಷೆ ವಿಜಯಲಕ್ಷಿö್ಮ, ಗ್ರಾ.ಪಂ. ಸದಸ್ಯರಾದ ಪೊನ್ನಚ್ಚನ ಲೋಕೇಶ್, ಸವಿತ, ಕೆಸರುಗದ್ದೆಯ ಮಾಲೀಕರು ಹಾಗೂ ಎಸ್ಮಾರ್ಟ್ ಗ್ಲೋಬಲ್ ಕಂಪೆನಿ ಸಿ.ಇ.ಓ. ಪ್ರಶಾಂತ್ ವೆಂಕಟರಮಣ, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಕೆ.ಟಿ.ಕೆ. ಉಲ್ಲಾಸ್, ಹಾಕತ್ತೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಬಿ.ಪಿ. ಗೀತಾಂಜಲಿ, ಸಂಪಾಜೆ ಹೋಬಳಿ ಕಂದಾಯ ಪರಿವೀಕ್ಷಕ ಬಿ.ಜಿ. ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಮಡಿಕೇರಿ ತಾಲೂಕು ಯುವ ಒಕ್ಕೂಟ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ತಿಳಿಸಿದ್ದಾರೆ. ಕ್ರೀಡಾಕೂಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪಾರಿತೋಷಕ ಹಾಗೂ ದೃಢೀಕರಣ ಪತ್ರ ನೀಡಲಾಗುವು ದೆಂದು ದಿಲೀಪ್ ತಿಳಿಸಿದರು.
ಗೋಷ್ಠಿಯಲ್ಲಿ ಮಡಿಕೇರಿ ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ ಘಟಕ ಅಧ್ಯಕ್ಷ ಎ.ಎ. ಅಯ್ಯಣ್ಣ, ಜಿಲ್ಲಾ ಯುವ ಒಕ್ಕೂಟ ಸದಸ್ಯ ನವೀನ್ ದೇರಳ, ಕಾವೇರಿ ಯುವಕ ಸಂಘದ ಉಪಾಧ್ಯಕ್ಷ ಲೋಕೇಶ್, ಸದಸ್ಯ ಸಜನ್ ಉಪಸ್ಥಿತರಿದ್ದರು.