ವಿಮಾನ ಪತನ - ಐವರು ಸಾವು
ಕಠ್ಮಂಡು, ಆ. ೭: ನೇಪಾಳ ರಾಜಧಾನಿ ಕಠ್ಮಂಡುವಿನ ವಾಯುವ್ಯ ಭಾಗದ ಪರ್ವತದಲ್ಲಿ ಬುಧವಾರ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆಯ ಮೃತದೇಹ ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ನುವಾಕೋಟ್ ಜಿಲ್ಲೆಯ ಸರ್ಕಾರಿ ಆಡಳಿತಾಧಿಕಾರಿ ಕೃಷ್ಣ ಪ್ರಸಾದ್ ಹುಮಗೈ ಅವರು ಹೇಳಿದ್ದಾರೆ. ಪೊಲೀಸರು ಮತ್ತು ಸೇನಾ ಸಿಬ್ಬಂದಿ ಹೆಲಿಕಾಪ್ಟರ್ ಪತನವಾದ ಸ್ಥಳಕ್ಕೆ ತಲುಪಿದ್ದಾರೆ ಮತ್ತು ಕಾರ್ಯಾಚರಣೆಗೆ ಸಹಾಯ ಮಾಡಲು ಎರಡು ರಕ್ಷಣಾ ಹೆಲಿಕಾಪ್ಟರ್ಗಳನ್ನು ಸಹ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಾಂಗ್ಲಾದ ಮುಖ್ಯಸ್ಥರಾಗಿ ಮೊಹಮ್ಮದ್ ಯೂನಸ್
ಢಾಕಾ, ಆ. ೭: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಆರ್ಥಿಕ ತಜ್ಞ ಮೊಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ತಾ. ೮ ರಂದು (ಇಂದು) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯ ಸೇನಾಧಿಕಾರಿ ವಾಕರ್-ಉಜ್-ಜಮನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೊಹಮ್ಮದ್ ಯೂನಸ್ ನಾಯಕತ್ವದ ಸಲಹಾ ಮಂಡಳಿಯ ೧೫ ಸದಸ್ಯರು ಗುರುವಾರ ರಾತ್ರಿ ೮ ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು. ೮೪ ವರ್ಷದ ಅರ್ಥಶಾಸ್ತçಜ್ಞ ಮೊಹಮ್ಮದ್ ಯೂನಸ್ ಅವರನ್ನು ಮಂಗಳವಾರ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಕ ಮಾಡಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಡಿಢೀರ್ ರಾಜೀನಾಮೆಯಿಂದಾಗಿ ಬಾಂಗ್ಲಾದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ವಿದ್ಯಾರ್ಥಿ ಆಂದೋಲನದ ಸಂಯೋಜಕರೊAದಿಗೆ ಶಹಾಬುದ್ದೀನ್ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.
ಬಾಂಗ್ಲಾದಲ್ಲಿ ನಿಲ್ಲದ ಪ್ರತಿಭಟನಾಕಾರರ ಅಟ್ಟಹಾಸ
ಢಾಕಾ, ಆ. ೭: ಬಾಂಗ್ಲಾದೇಶದಲ್ಲಿ ವಿವಾದಾತ್ಮಕ ಮೀಸಲಾತಿ ವ್ಯವಸ್ಥೆಯನ್ನು ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆಯ ನಡುವೆ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಭಾರತಕ್ಕೆ ಬಂದಿಳಿದ ಬಳಿಕ ದೇಶಾದ್ಯಂತ ನಡೆದ ದಂಗೆಯಲ್ಲಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ನಾಯಕರು ಮತ್ತು ಅವರ ಕುಟುಂಬದ ಸದಸ್ಯರ ೨೯ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಹಸೀನಾ ಅವರು ದೇಶ ತೊರೆದ ಬಳಿಕ ಅವಾಮಿ ಲೀಗ್ ನಾಯಕರಿಗೆ ಸೇರಿದ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಳಿಕ ಅಲ್ಲಿರುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಕ್ಯುಮಿಲ್ಲಾದಲ್ಲಿ ಜನಸಮೂಹ ನಡೆಸಿದ ದಾಳಿಯಲ್ಲಿ ಕನಿಷ್ಟ ೧೧ ಜನರು ಸಾವಿಗೀಡಾಗಿದ್ದಾರೆ. ಮಾಜಿ ಕೌನ್ಸಿಲರ್ ಮೊಹಮ್ಮದ್ ಶಾ ಆಲಂ ಅವರ ಮೂರು ಅಂತಸ್ತಿನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಆರು ಮಂದಿ ಮೃತಪಟ್ಟಿದ್ದಾರೆ.
೧೪ ತಾಸು ಕಾರ್ಯಾಚರಣೆ ಬಳಿಕ ಕಾರ್ಮಿಕನ ಶವ ಪತ್ತೆ
ಬೆಳಗಾವಿ, ಆ. ೭: ಬೆಳಗಾವಿ ಹೊರವಲಯದ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಓರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ನಾವಗೆ ಗ್ರಾಮದಲ್ಲಿ ಸ್ನೇಹಂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಿಕ್ಕಿಕೊಂಡಿದ್ದ ಕಾರ್ಮಿಕನ ದೇಹ ಸುಟ್ಟು ಭಸ್ಮವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ಕಾರ್ಮಿಕನನ್ನು ಬೆಳಗಾವಿಯ ಮಾರ್ಕಂಡೇಯ ನಗರದ ನಿವಾಸಿ ಯಲ್ಲಪ್ಪ ಗುಂಡ್ಯಾಗೋಳ (೨೦) ಎಂದು ಗುರುತಿಸಲಾಗಿದೆ. ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬೆಂಕಿ ಹೊತ್ತಿಕೊಂಡಿತು. ಆಗ ಒಳಗಡೆ ಇದ್ದ ಹಲವು ಅಗ್ನಿ ಕಾರ್ಮಿಕರು ದಿಕ್ಕಾಪಾಲಾಗಿ ಓಡಿದರು. ಬೆಂಕಿಯಲ್ಲಿ ಬೆಂದ ಮೂವರನ್ನು ಹೊರಕ್ಕೆ ಎಳೆತಂದು ರಕ್ಷಿಸಲಾಯಿತು. ಆದರೆ, ಯಲ್ಲಪ್ಪ ಲಿಫ್ಟ್ನಲ್ಲಿ ಸಿಕ್ಕಿ ಕೊಂಡಿದ್ದರು. ಲಿಫ್ಟ್ನಲ್ಲೇ ಮೊದಲು ಬೆಂಕಿ ಹೊತ್ತಿಕೊಂಡಿದ್ದರಿAದ ಯಲ್ಲಪ್ಲ ಪಾರಾಗಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಹಲವು ಸಿಬ್ಬಂದಿ ರಾತ್ರಿ ಇಡೀ ಕಾರ್ಯಾಚರಣೆ ಮಾಡಿದರೂ ಬೆಂಕಿ ಹತೋಟಿಗೆ ಬರಲಿಲ್ಲ. ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಕಟ್ಟಡದ ಗೋಡೆ, ಕಿಟಕಿಗಳನ್ನು ಜೆಸಿಬಿ ಯಂತ್ರದಿAದ ಒಡೆದು ಹಾಕಿ ಒಳಗೆ ನೀರು ಚಿಮ್ಮಿಸಿ ಬೆಂಕಿ ನಂದಿಸಲು ಯತ್ನಿಸಲಾಯಿತು. ಬಳಿಕ ಲಿಫ್ಟ್ನಲ್ಲಿದ್ದ ಯಲ್ಲಪ್ಪ ಅವರ ಮೃತದೇಹವನ್ನು ಹೊರತೆಗೆಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಯನಾಡು ದುರಂತವನ್ನು ರಾಷ್ಟಿçÃಯ ವಿಪತ್ತು ಎಂದು ಘೋಷಿಸಲು ಒತ್ತಾಯ
ನವದೆಹಲಿ, ಆ. ೭: ಕೇರಳದ ವಯನಾಡ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕುಸಿತವನ್ನು ರಾಷ್ಟಿçÃಯ ವಿಪತ್ತು ಎಂದು ಘೋಷಿಸಬೇಕು ಎಂದು ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಒತ್ತಾಯಿಸಿದರು. ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಸಂತ್ರಸ್ತರಿಗೆ ಹೆಚ್ಚು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ದುರಂತ ಘಟಿಸಿದ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದೇನೆ. ಅಲ್ಲಿ ೨೦೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ, ಅದಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಕೆಲವೆಡೆ ಕುಟುಂಬದವರೆಲ್ಲಾ ಮೃತಪಟ್ಟು, ಒಬ್ಬರು ಉಳಿದುಕೊಂಡಿದ್ದಾರೆ. ಮತ್ತೊಂದೆಡೆ ಮಕ್ಕಳು ಅನಾಥರಾಗಿದ್ದಾರೆ ಎಂದು ಹೇಳಿದರು. ಇದೊಂದು ದೊಡ್ಡ ದುರಂತ. ಅಲ್ಲಿನ ಜನ ಜೀವನದ ಪುನರ್ವಸತಿಗೆ ಸಮಗ್ರ ಪ್ಯಾಕೇಜ್ ಘೋಷಿಸಬೇಕು. ಅವಘಡಗಳನ್ನು ಮೆಟ್ಟಿ ನಿಲ್ಲುವ ಮೂಲ ಸೌಕರ್ಯ ಒದಗಿಸಬೇಕು ಎಂದು ಹೇಳಿದರು. ಕರ್ನಾಟಕ, ತಮಿಳುನಾಡು, ತೆಲಂಗಾಣ ಸರ್ಕಾರಗಳ ನೆರವು ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಕೇಂದ್ರೀಯ ಪಡೆಗಳು ಹಾಗೂ ಸೇನೆಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ನ್ಯಾ. ಸಹ್ರಾವತ್ ಮಾತು ಕಡತದಿಂದ ತೆಗೆಯಲು ಸುಪ್ರೀಂಕೋರ್ಟ್ ಆದೇಶ
ನವದೆಹಲಿ, ಆ. ೭: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಏಕಸದಸ್ಯ ಪೀಠವೊಂದು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತನ್ನ ವಿರುದ್ಧ ಆಡಿದ್ದ ಮಾತುಗಳನ್ನು ಕಲಾಪದ ಕಡತಗಳಿಂದ ತೆಗೆದುಹಾಕಲು ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ಆ ಮಾತುಗಳು ‘ಅನಗತ್ಯವಾಗಿದ್ದವು', ಅವು ‘ಅಪಮಾನಕರವಾಗಿದ್ದವು' ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಹೇಳಿದೆ. ಐವರು ಸದಸ್ಯರ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರೂ ಇದ್ದರು. ‘ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಪರಮೋಚ್ಚವಲ್ಲ ದೇಶದಲ್ಲಿ ಈ ಸಂವಿಧಾನವೇ ಪರಮೋಚ್ಚ' ಎಂದು ಸುಪ್ರೀಂಕೋರ್ಟ್ ಹೇಳಿದೆ. ಹೈಕೋರ್ಟ್ ನ್ಯಾಯಮೂರ್ತಿ ಆಡಿದ ಮಾತುಗಳು ತನಗೆ ನೋವು ಉಂಟುಮಾಡಿವೆ ಎಂದು ಪೀಠವು ವಿಚಾರಣೆ ಸಂದರ್ಭದಲ್ಲಿ ಹೇಳಿದೆ. ಹೈಕೋರ್ಟ್ನ ಆದೇಶದಲ್ಲಿ ಹಲವು ಸಂಗತಿಗಳ ಬಗ್ಗೆ ಅನಗತ್ಯವಾದ ಮಾತುಗಳನ್ನು ಉಲ್ಲೇಖಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉನ್ನತ ಹಂತದ ನ್ಯಾಯಾಲಯಗಳು ನೀಡುವ ಆದೇಶಗಳಿಂದ ನ್ಯಾಯಮೂರ್ತಿಗಳು ಬಾಧೆಗೆ ಒಳಗಾಗುವುದಿಲ್ಲ. ನ್ಯಾಯಾಂಗಕ್ಕೆ ಅಗತ್ಯವಿರುವ ಶಿಸ್ತನ್ನು ಕಾಯ್ದುಕೊಳ್ಳಬೇಕು ಎಂದು ಪೀಠವು ಹೇಳಿದೆ. ಹೈಕೋರ್ಟ್ನಲ್ಲಿ ನಡೆಯುತ್ತಿದ್ದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರ ಬಗ್ಗೆ ನ್ಯಾಯಮೂರ್ತಿ ಸಹ್ರಾವತ್ ಅವರು ತೀರಾ ಕಟುವಾದ ಮಾತುಗಳನ್ನು ಆಡಿದ್ದರು.
ತೆರೆದ ಬಾವಿಗೆ ಬಿದ್ದು ಹೆಣ್ಣು ಸಿಂಹ ಸಾವು
ಗುಜರಾತ್, ಆ. ೭: ಬೊಟಾಡ್ ಜಿಲ್ಲೆಯ ಇಟಾರಿಯಾ ಹಳ್ಳಿಯೊಂದರಲ್ಲಿ ತೆರೆದ ಬಾವಿಗೆ ಬಿದ್ದು, ಸಿಂಹಿಣಿಯೊAದು (ಹೆಣ್ಣು ಸಿಂಹ) ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆಯು ಮಂಗಳವಾರ ರಾತ್ರಿ ಸಂಭವಿಸಿದ್ದು, ಬುಧವಾರ ಬೆಳಿಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ಐಎಸ್ ಪ್ರಜಾಪತಿ ತಿಳಿಸಿದ್ದಾರೆ. ಸಿಂಹಿಣಿಯ ಮೃತದೇಹವನ್ನು ಬಾವಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು.