ಮಡಿಕೇರಿ, ಆ. ೭: ಬಡವರ್ಗ ದವರ, ಕಾರ್ಮಿಕರ ಅನುಕೂಲತೆಗಾಗಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಸರಕಾರದ ವತಿಯಿಂದ ವಿದ್ಯುತ್ ಅಥವಾ ಅನಿಲ ಚಿತಾಗಾರ ನಿರ್ಮಾಣ ಮಾಡ ಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರೇಸ್ಕೋರ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿ ಬಳಿಯಿಂದ ತಮಟೆ ಸಹಿತ ಅಣಕು ಶವಯಾತ್ರೆಯೊಂದಿಗೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಹಳೆ ಖಾಸಗಿ ಬಸ್ ನಿಲ್ದಾಣ, ಇಂದಿರಾಗಾAಧಿ ವೃತ್ತಕ್ಕಾಗಿ ಹಾದು ಜ.ತಿಮ್ಮಯ್ಯ ವೃತ್ತದಲ್ಲಿ ಸಮಾವೇಶ ಗೊಂಡರು. ಕೆಲಕಾಲ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು, ಸರಕಾರ ಹಾಗೂ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾ ರರನ್ನುದ್ದೇಶಿಸಿ ಮಾತನಾಡಿದ ಬಿ.ಎಸ್.ಪಿ. ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್ ಕುಮಾರ್, ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಮತ್ತು ಅನಿಲ ಚಿತಾಗಾರ ಇಲ್ಲದೆ ಇರುವುದರಿಂದ ಜಿಲ್ಲೆಯಲ್ಲಿ ಬಹುಕಾಲದಿಂದ ವಾಸಮಾಡಿ ಕೊಂಡಿರುವ ಭೂಹೀನ ಬಡ ಕೂಲಿ ಕಾರ್ಮಿಕರಿಗೆ ಶವ ಸಂಸ್ಕಾರ ಮಾಡಲು ತೊಂದರೆಯಾ ಗುತ್ತಿದೆ. ಜಿಲ್ಲೆಯಲ್ಲಿ ೩-೪ ತಿಂಗಳು ಮಳೆಗಾಲ ಇರುವುದರಿಂದ ಕಟ್ಟಿಗೆಯ ಅಭಾವ ಕೂಡ ತಲೆದೋರುತ್ತದೆ. ಸರಕಾರ ಅಭಿವೃದ್ಧಿ ಹೆಸರಿನಲ್ಲಿ ಕಟ್ಟಡಗಳನ್ನು ಮಾತ್ರ ನಿರ್ಮಾಣ ಮಾಡುತ್ತಿದೆ. ಇದು ಕಮಿಷನ್ ಗಳಿಸುವ ಉದ್ದೇಶ ವಾಗಿರುತ್ತದೆ. ನೈಜವಾದ ಮೂಲಭೂತ ಸೌಲಭ್ಯ ಗಳನ್ನು ಒದಗಿಸಲು ಅಲ್ಲ. ಈ ಬಗ್ಗೆ ಈ ಹಿಂದೆಯೇ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನ ದೊರಕದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮುಂದಕ್ಕೂ ಸ್ಪಂದನ ಸಿಗದಿದ್ದಲ್ಲಿ ಹೋರಾಟ ಮುಂದುವರಿಸುವುದಾಗಿ ಹೇಳಿದರು. ಬಿ.ಎಸ್.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮಪುತ್ರಿ ರೇವತಿರಾಜ್ ಮಾತನಾಡಿ, ಜಿಲ್ಲೆಯ ೫ ತಾಲೂಕುಗಳಲ್ಲಿ ವಿದ್ಯುತ್ ಚಿತಾಗಾರ ಆರಂಭಿಸುವAತೆ ಕಳೆದ ಫೆಬ್ರವರಿ ತಿಂಗಳಿನಲ್ಲಿಯೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ಆದರೂ ಸ್ಪಂದನ ದೊರೆತಿಲ್ಲ. ಸ್ಪಂದಿಸದಿದ್ದಲ್ಲಿ ಬೀದಿಬೀದಿಯಲ್ಲಿ ತಮಟೆ
(ಮೊದಲ ಪುಟದಿಂದ) ಚಳವಳಿ ಹಮ್ಮಿಕೊಳ್ಳಲಾಗುವುದು. ಸರಕಾರದಿಂದ ಅನುದಾನ ಒದಗಿಸಲು ಸಾಧ್ಯವಾಗದಿದ್ದಲ್ಲಿ ಮನೆ- ಮನೆಯಿಂದ ಹಣ ಸಂಗ್ರಹ ಮಾಡಿ ಯೋಜನೆ ಕಾರ್ಯಗತ ಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಬಿ.ಎಸ್.ಪಿ.ಯ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ರಾಜು, ಅನಂತ್, ಚೇತನ್ಕುಮಾರ್, ಬಹುಜನ ಮಹಿಳಾ ಹೋರಾಟ ವೇದಿಕೆಯ ಅಧ್ಯಕ್ಷೆ ಸರಸ್ವತಿ, ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ಕಳ್ಳೀರ ಹರೀಶ್, ಮೈಸೂರು ಜಿಲ್ಲಾ ಉಸ್ತುವಾರಿ ಚಂದ್ರಶೇಖರ್, ಹುಣಸೂರು ಅಧ್ಯಕ್ಷ ಪ್ರಸನ್ನ, ಇನ್ನಿತರರು ಪಾಲ್ಗೊಂಡಿದ್ದರು. ನಂತರ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಡಿಕೇರಿ ನಗರ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.