ಸಿದ್ದಾಪುರ, ಆ. ೬: ಇತ್ತೀಚಿಗೆ ಸುರಿದ ಭಾರೀ ಮಳೆಗೆ ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಪ್ರವಾಹ ಸಂಭವಿಸಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದ ಕರಡಿಗೋಡು ವ್ಯಾಪ್ತಿಯ ೧೭ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು.
ಕರಡಿಗೋಡು ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಾಗಿರುವ ೧೭ ಸದಸ್ಯರಿಗೆ ಆಹಾರ ಪದಾರ್ಥಗಳನ್ನು ಒಳಗೊಂಡ ಕಿಟ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ್ ಮಾತನಾಡಿದರು. ಮಳೆಗೆ ಮನೆ ಕುಸಿದಿರುವ ಸುಮಾರು ೧೩ ಮಂದಿ ಯೋಜನೆಯ ಪಾಲುದಾರರಿಗೆ ಮನೆ ನಿರ್ಮಿಸಿಕೊಡುವ ಮಹತ್ತರ ಕಾರ್ಯಕ್ಕೆ ಸಂಘ ಮುಂದಾಗಿದ್ದು, ಗ್ರಾಮಾಭಿವೃದ್ದಿ ಯೋಜನೆಯು ಸದಾ ಪಾಲುದಾರರ ಸಂಕಷ್ಟಕ್ಕೆ ಸ್ಪಂದಿಸುತ್ತಿದೆ ಎಂದರು.
ಈ ಸಂದರ್ಭ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಕೃಷಿ ಅಧಿಕಾರಿ ರಾಕೇಶ್, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಪ್ರೇಮಾಗೋಪಾಲ್, ಒಕ್ಕೂಟದ ಪದಾಧಿಕಾರು ಹಾಗೂ ಸೇವಾಪ್ರತಿ ನಿಧಿಗಳು ಹಾಜರಿದ್ದರು.