ಮಡಿಕೇರಿ, ಆ. ೭: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಸಂಘದ ಅಧ್ಯಕ್ಷರಾದ ಡಾ. ಪಾರ್ವತಿ ಅಪ್ಪಯ್ಯ ಅಧ್ಯಕ್ಷತೆಯಲ್ಲಿ ಕಾಲೇಜಿನ ಆವರಣದಲ್ಲಿ ನಡೆಯಿತು.
ಮಹಾಸಭೆಯಲ್ಲಿ ಕಾಲೇಜಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ಶೈಕ್ಷಣಿಕ ವರ್ಷ೨೦೨೩-೨೪ರ ಅವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ರ್ಯಾಂಕ್ ಪಡೆದ ಶಶಿಕಿರಣ್ ವೈ.ಆರ್. (Pಉ ಆiಠಿಟomಚಿ iಟಿ ಙogiಛಿ sಛಿieಟಿಛಿe), ಹೇಮಾವತಿ ಬಿ.ಎನ್. (ಕೊಡವ ಎಂ.ಎ) ಸೂಕ್ಷಾö್ಮಣುಜೀವಿ ವಿಜ್ಞಾನ ವಿಷಯದಲ್ಲಿ ವಿಶ್ವವಿದ್ಯಾನಿಲಯಕ್ಕೆ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿ ಹಿಬಾತುಲ್ ಬಾರಿ, ಸೆಸ್ಟೋಬಾಲ್ ಕ್ರೀಡೆಯಲ್ಲಿ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ ಮೊಹಮ್ಮದ್ ಶಾಹಿಲ್ ಕೆ.ಯು. ಹಾಕಿಯಲ್ಲಿ ರಾಷ್ಟಿçÃಯ ಮಟ್ಟದಲ್ಲಿ ಸಾಧನೆಗೈದ ಗಾಯತ್ರಿ ಇವರುಗಳನ್ನು ಸನ್ಮಾನಿಸಲಾಯಿತು. ಅಲ್ಲದೆ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಸಂಘ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
೨೦೨೩-೨೪ನೇ ಸಾಲಿನ ಸಂಘದ ಕಾರ್ಯ ಚಟುವಟಿಕೆಗಳು ಹಾಗೂ ಲೆಕ್ಕ ಪತ್ರದ ವರದಿಯನ್ನು ಸಂಘದ ಕಾರ್ಯದರ್ಶಿ ನಿಖಿಲ್ ಎಂ.ಎನ್. ಮಂಡಿಸಿದರು. ಸಂಘದ ಕಾರ್ಯದರ್ಶಿ ನಿಖಿಲ್ ನಾಚಪ್ಪ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕರಾದ ವಿಜು ನಂಜಪ್ಪ ಸ್ವಾಗತಿಸಿದರು, ಶಶಿಕಿರಣ್ ವಂದಿಸಿದರು.