ಸೋಮವಾರಪೇಟೆ, ಆ. ೭: ರಾಷ್ಟçಧ್ವಜಕ್ಕೆ ಅಪಮಾನವಾಗದ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಬೆಂಗಳೂರಿನಲ್ಲಿ ಅಕ್ರಮವಾಗಿ ಕಳಪೆ ಗುಣಮಟ್ಟದ ಮಾಂಸ ಸರಬರಾಜು ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ರಾಮನಗರದ ಹೆಸರನ್ನು ಬದಲಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರಾಷ್ಟಿçÃಯ ಹಬ್ಬಗಳ ಆಚರಣೆ ಸಂದರ್ಭ ರಾಷ್ಟç ಧ್ವಜವನ್ನು ಕಾರ್ಯಕ್ರಮದ ನಂತರ ಎಲ್ಲೆಂದರಲ್ಲಿ ಎಸೆದು ಅಗೌರವ ಸಲ್ಲಿಸುತ್ತಿದ್ದಾರೆ. ನ್ಯಾಯಾಲಯ ಪ್ಲಾಸ್ಟಿಕ್ ಧ್ವಜದ ಬಳಕೆಯನ್ನು ನಿಷೇಧಿಸಿದ್ದರೂ, ಇಂದಿಗೂ ಅವುಗಳ ಬಳಕೆ ನಡೆ ಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪದಾಧಿಕಾರಿಗಳು ಹೇಳಿದರು.
ಬೆಂಗಳೂರಿನಲ್ಲಿ ಅಕ್ರಮವಾಗಿ ಕಳಪೆ ಗುಣಮಟ್ಟದ ಮಾಂಸ ಸರಬರಾಜು ಮಾಡುವವರ ಮೇಲೆ ಕ್ರಮಕ್ಕೆ ಒತ್ತಾಯಿಸಿದವರ ಮೇಲೆಯೇ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದು, ಸಂಬAಧಿಸಿದ ಪೊಲೀಸ್ ಅಧಿಕಾರಿಯ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇತ್ತೀಚೆಗೆ ರಾಜ್ಯ ಸರ್ಕಾರ ರಾಮನಗರದ ಹೆಸರನ್ನು ಬದಲಿಸಲು ಮುಂದಾಗಿರುವುದು ಖಂಡನೀಯ. ಹಲವು ಇತಿಹಾಸವನ್ನು ಹೊಂದಿರುವ ರಾಮನಗರ ಹೆಸರನ್ನು ಬದಲಿಸ ಬಾರದು. ಬದಲಾವಣೆಯ ನಿರ್ಧಾರ ದಿಂದ ಸರ್ಕಾರ ಹಿಂದೆ ಸರಿಯದಿದ್ದಲ್ಲಿ, ಹಿಂದೂ ಸಮಾಜ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಪದಾಧಿಕಾರಿಗಳು ಎಚ್ಚರಿಸಿದರು.
ಈ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ನವೀನ್ಕುಮಾರ್ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದರು. ಈ ಸಂದರ್ಭ ಸಮಿತಿಯ ಬಿ.ಆರ್. ಈರಪ್ಪ, ಪಿ.ಎನ್. ಪ್ರಸಾದ್, ನವೀನ್ಕುಮಾರ್, ಗಿರೀಶ್, ದೇವಯ್ಯ ಹಾಗೂ ಹೇಮಂತ್ ಇದ್ದರು.