ಮಡಿಕೇರಿ, ಆ. ೭: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ನೀಡಿದ ದೂರಿನ ವಿಚಾರವಾಗಿ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೈಕೋರ್ಟ್ನಲ್ಲಿ ಎ.ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಅರ್ಜಿ ಸಲ್ಲಿಸಲು ತೀರ್ಮಾನ ಮಾಡಲಾಗಿದೆ. ರಾಜ್ಯಪಾಲರ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಯಲಿದೆ ಎಂದರು.