ಮಡಿಕೇರಿ, ಆ. ೭: ಪ್ರಸಕ್ತ ೨೦೨೪-೨೫ ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳುಮೆಣಸು ಮತ್ತು ಅಡಿಕೆ ಬೆಳೆಗಳಿಗೆ ರೈತರು ತಾ. ೧೬ ರವರೆಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಕಾಲಾವಕಾಶ ಕಲ್ಪಿಸಲಾಗಿದೆ.
ರೈತರು ಇದರ ಸದುಪಯೋಗ ಪಡೆದುಕೊಳ್ಳುವುದು ಹಾಗೂ ಹತ್ತಿರದ ಬ್ಯಾಂಕ್ಗಳಲ್ಲಿ ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆಯನ್ನು ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಯೋಗೇಶ್ ತಿಳಿಸಿದ್ದಾರೆ.