ಮಡಿಕೇರಿ, ಆ. ೮: ಅಖಂಡ ಭಾರತ ಸಂಕಲ್ಪ ಯಾತ್ರೆ ಅಂಗವಾಗಿ ವಿವಿಧೆಡೆ ಪಂಜಿನ ಮೆರವಣಿಗೆ ನಡೆಯುವ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ತಾ. ೯ರಂದು (ಇಂದು) ಬೆಳಿಗ್ಗೆ ೬ ಗಂಟೆಯಿAದ ತಾ. ೧೦ರ ಬೆಳಿಗ್ಗೆ ೬ ಗಂಟೆಯ ತನಕ ಮಡಿಕೇರಿ ನಗರ ಹಾಗೂ ಸುತ್ತಮುತ್ತಲಿನ ೧೦ ಕಿ.ಮೀ. ವ್ಯಾಪ್ತಿಯಲ್ಲಿ, ತಾ. ೧೦ರಂದು ಬೆಳಿಗ್ಗೆ ೬ ಗಂಟೆಯಿAದ ತಾ. ೧೧ರ ಬೆಳಿಗ್ಗೆ ೬ ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ ೧೦ ಕಿ.ಮೀ. ವ್ಯಾಪ್ತಿಯಲ್ಲಿ, ತಾ. ೧೧ರ ಬೆಳಿಗ್ಗೆ ೬ ಗಂಟೆಯಿAದ ತಾ. ೧೨ ಬೆಳಿಗ್ಗೆ ೬ ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯದಂಗಡಿ, ಹೊಟೇಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಿದ್ದಾರೆ.