ಮಡಿಕೇರಿ, ಆ. ೮: ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾ ಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬAಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿ ರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊ ಳ್ಳಲು ಸೂಚಿಸಿದೆ. ಹಾಗೆಯೇ ಪ್ರವಾ ಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರ ವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಗಿ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಗಿ ಅವಧಿಯು ೫ ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಗಿಯನ್ನು ನವೀಕರಿಸುವಂತೆ ತಿಳಿಸಲಾಗಿದೆ.

ಹೋಂ-ಸ್ಟೇಗಳ ನೋಂದಣಿ ಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ hಣಣಠಿs://ಞಣಣಜಿ.ಞಚಿಡಿಟಿಚಿಣಚಿಞಚಿ ಣouಡಿism.oಡಿg/ಟogiಟಿ ಮುಖಾಂತರ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳ ಬಹುದಾಗಿದೆ. ಹೋಂ-ಸ್ಟೇ ಪರಿವೀಕ್ಷ ಣೆಗಾಗಿ ಅಧಿಕಾರಿಗಳು ಭೇಟಿ ನೀಡಿ ದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿ ಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು.

ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವ ಜನಿಕರು ದೂರು / ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ೫೭೧೨೦೧ ದೂರವಾಣಿ ಸಂಖ್ಯೆ:೦೮೨೭೨-೨೦೦೫೧೯ ಅಥವಾ ಈ-ಮೇಲ್ : ಜಜಞoಜಚಿgu ಣouಡಿism@gmಚಿiಟ.ಛಿom ಗೆ ತಿಳಿಸಬಹುದು.

ಅದರಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಟೇಲ್, ರೆಸ್ಟೋರೆಂಟ್, ರೆಸಾರ್ಟ್, ಟರ‍್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್ಗಳ ಉದ್ದಿಮೆದಾರರುಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ hಣಣಠಿ://ಞಣಣಜಿ.ಞಚಿಡಿಟಿಚಿಣಚಿಞಚಿಣouಡಿism.oಡಿg/ ನಲ್ಲಿ ತಮ್ಮ ಸಂಸ್ಥೆಯನ್ನು ನೋಂದಣಿ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ.