ಸೋಮವಾರಪೇಟೆ, ಆ. ೮: ಜಿಲ್ಲೆಯಲ್ಲಿ ೧೬,೫೨೮ ಪಡಿತರ ಚೀಟಿಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಕ್ರಮ ವಹಿಸಿದೆ. ಇದರೊಂದಿಗೆ ಕಳೆದ ೬ ತಿಂಗಳಿನಿAದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಪಡೆಯದೇ ಇರುವ ೫,೨೭೮ ಪಡಿತರ ಚೀಟಿಗಳನ್ನು ತಕ್ಷಣದಿಂದಲೇ ಅಮಾನತ್ತಿನಲ್ಲಿಡಲು ಆದೇಶ ಹೊರಬಿದ್ದಿದ್ದು, ಅದರಂತೆ ಈಗಾಗಲೇ ೫,೨೭೮ ಚೀಟಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಇಲ್ಲದಿದ್ದರೂ ವೈದ್ಯಕೀಯ ಚಿಕಿತ್ಸೆ, ಅನ್ನಭಾಗ್ಯ ಅಕ್ಕಿ, ಗೃಹಲಕ್ಷಿö್ಮÃ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಲಾಭ ಪಡೆಯುವ ಉದ್ದೇಶದಿಂದ, ಇಲಾಖೆಯ ನಿಯಮಗಳನ್ನು ಮೀರಿ ಪಡೆದುಕೊಂಡಿದ್ದ, ೧೬,೫೨೮ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮಕೈಗೊಳ್ಳುವಂತೆ ಇಲಾಖೆಯ ಮೇಲಧಿಕಾರಿಗಳಿಂದ ಆದೇಶ ಹೊರಬಂದಿದ್ದು, ಈ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರತಿದಿನ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಇದರ ಭಾಗವಾಗಿ ಕಳೆದ ೨೦೨೩ ನವೆಂಬರ್ ತಿಂಗಳಿನಿAದ ೨೦೨೪ರ ಏಪ್ರಿಲ್ವರೆಗೆ ಒಟ್ಟು ೬ ತಿಂಗಳು ಪಡಿತರ ಪಡೆಯದೇ ಇರುವ ೪೩೬ ಎಎವೈ, ೪೮೪೨ ಬಿಪಿಎಲ್ ಪಡಿತರ ಚೀಟಿ ಸೇರಿದಂತೆ ಒಟ್ಟು ೫೨೭೮ ರೇಷನ್ ಕಾರ್ಡ್ಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.
ಇದರೊಂದಿಗೆ ಆದಾಯ ತೆರಿಗೆ ಪಾವತಿದಾರರು ಪಡೆದುಕೊಂಡಿರುವ ೧,೦೩೨ ಪಡಿತರ ಚೀಟಿದಾರರು, ರೂ. ೧.೨ ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ೧೫,೪೬೯ ಪಡಿತರ ಚೀಟಿದಾರರು, ಹೆಚ್ಆರ್ಎಂಎಸ್/ಕೆಜಿಐಡಿ ಜೊತೆಗೆ ಜೋಡಣೆ ಯಾಗಿರುವ ೨೭ ಪಡಿತರ ಚೀಟಿಗಳು ಸೇರಿದಂತೆ ಒಟ್ಟು ೧೬,೫೨೮ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಿದ್ದು, ಇವುಗಳನ್ನು ೧೦ ದಿನಗಳ ಒಳಗೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
ಅನರ್ಹ ಪಡಿತರ ಚೀಟಿಗಳ ವಿವರವನ್ನು ಈಗಾಗಲೇ ಸಂಬAಧಿಸಿದ ತಾಲೂಕುವಾರು ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗಳಿಗೆ ಕಳುಹಿಸಲಾಗಿದೆ. ಈ ಪಟ್ಟಿಯ ಬಗ್ಗೆ ಕೈಗೊಂಡ ಕ್ರಮಗಳನ್ನು ಪ್ರತಿ ದಿನ ಗೂಗಲ್ ಸ್ಪೆçಡ್ ಶೀಟ್ನಲ್ಲಿ ಸಲ್ಲಿಸಬೇಕು. ಮುಂದಿನ ೧೦ ದಿನಗಳ ಒಳಗೆ ಇಡೀ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಆಯುಕ್ತರ ಕಚೇರಿಯಿಂದ ಸೂಚನೆ ಬಂದಿದೆ.
ಈ ಸೂಚನೆ ಅನ್ವಯ ಆಹಾರ, ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರ ಕಚೇರಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್, ಆಹಾರ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಕಳೆದ ಜುಲೈ ೮ರಂದು ವಿಧಾನ ಸೌಧದಲ್ಲಿ
(ಮೊದಲ ಪುಟದಿಂದ) ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದರು.
ರಾಜ್ಯದಲ್ಲಿ ಶೇ ೮೦ರಷ್ಟು ಬಿಪಿಎಲ್ ಕುಟುಂಬಗಳಿದ್ದು, ೪.೩೭ ಕೋಟಿ ಮಂದಿ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದಾರೆ. ಹೊಸ ಕಾರ್ಡ್ಗಳಿಗೆ ರಾಜ್ಯದಲ್ಲಿ ೨.೯೫ ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ವಿಲೇವಾರಿಗೆ ಬಾಕಿಯಿದೆ. ಈ ಹಿನ್ನೆಲೆ ಅನರ್ಹ ಕಾರ್ಡ್ಗಳನ್ನು ರದ್ದುಗೊಳಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ನಿರ್ದೇಶನ ನೀಡಿದ್ದರು.
ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳು, ಕಳೆದ ೬ ತಿಂಗಳುಗಳಿAದ ಪಡಿತರ ಪಡೆಯದೇ ಇರುವ ಕಾರ್ಡ್ದಾರರನ್ನು ಪತ್ತೆ ಹಚ್ಚುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ರಾಜ್ಯಾದ್ಯಂತ ತಾಲೂಕು, ಜಿಲ್ಲಾವಾರು ಪಟ್ಟಿಗಳು ಸಿದ್ಧಗೊಂಡಿದ್ದು, ಕೊಡಗಿನಲ್ಲಿ ೫೨೭೮ ಕಾರ್ಡ್ಗಳನ್ನು ಗುರುತಿಸಿ, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜೊತೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ೧,೦೩೨, ವಾರ್ಷಿಕ ರೂ. ೧.೨ ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ೧೫,೪೬೯, ಹೆಚ್ಆರ್ಎಂಎಸ್/ಕೆಜಿಐಡಿ ಜೊತೆಗೆ ಜೋಡಣೆಯಾಗಿರುವ ೨೭ ಪಡಿತರ ಚೀಟಿಗಳನ್ನು ಪತ್ತೆಹಚ್ಚಿ, ಆಹಾರ ಇಲಾಖೆಗೆ ಸಲ್ಲಿಸಲಾಗಿದ್ದು, ಇವುಗಳನ್ನು ಅನರ್ಹಗೊಳಿಸಲು ಅಧಿಕಾರಿಗಳು ಕ್ರಮ ವಹಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ೨೦೨೨ರಿಂದ ಇಲ್ಲಿಯವರೆಗೆ ಒಟ್ಟು ೧,೧೧೫ ಮಂದಿ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಎಪಿಎಲ್ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲದೇ ಇರುವುದರಿಂದ ಅರ್ಜಿಗಳು ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ನೂತನ ಸರ್ಕಾರ ಬಂದ ನಂತರವೂ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಲ್ಲ. ಹೀಗಾಗಿ ಹೆಚ್ಚಿನ ಮಂದಿ ಅರ್ಹರಿದ್ದರೂ ಅರ್ಜಿ ಸಲ್ಲಿಕೆಯಾಗುತ್ತಿಲ್ಲ.
ಈ ನಡುವೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷಿö್ಮÃ ಯೋಜನೆಗೆ ಪಡಿತರ ಚೀಟಿ ಪ್ರಮುಖ ಆದ್ಯತೆಯಾಗಿರುವುದರಿಂದ ಹಲವಷ್ಟು ಮಂದಿ ಅರ್ಜಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯಲು ತುದಿಗಾಲಲ್ಲಿ ನಿಂತಿದ್ದಾರೆ. ಇದರೊಂದಿಗೆ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ಬಡವರೂ ಸಹ ಬಿಪಿಎಲ್ ಕಾರ್ಡ್ ಇಲ್ಲದೆ ಕಂಗಾಲಾಗಿದ್ದಾರೆ.
ನೂತನವಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಸ್ಥಗಿತಗೊಂಡಿರುವುದರಿAದ ಎಲ್ಲರೂ ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಇವೆಲ್ಲದರ ನಡುವೆ ಗ್ಯಾರಂಟಿ ಯೋಜನೆಗಳ ಭಾರವನ್ನು ಒಂದಿಷ್ಟು ಇಳಿಸಿಕೊಳ್ಳಲು ಮುಂದಾಗಿರುವ ಸರ್ಕಾರ, ಅನರ್ಹ ಕಾರ್ಡ್ಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸಲು ಕ್ರಮ ಕೈಗೊಂಡಿದೆ.
- ವಿಜಯ್ ಹಾನಗಲ್