ಮಡಿಕೇರಿ, ಆ. ೯ : ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಅಂತರರಾಷ್ಟಿçÃಯ ಕಾನೂನಿನನ್ವಯ ಕೊಡವರ ಸಂವಿಧಾನಿಕ ಹಕ್ಕುಗಳನ್ನು ಮಂಡಿಸಿತು.

ಸಾAವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮ ಸಂಜಾತ ಕೊಡವ ಬುಡಕಟ್ಟು ಜನರ ಹಕ್ಕೊತ್ತಾಯದ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯುವ ಸಲುವಾಗಿ ಸತ್ಯಾಗ್ರಹ ನಡೆಸಿರುವುದಾಗಿ ಧರಣಿಯ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು.

ಕೊಡವರು ಕೊಡವ ನೆಲದ ಮೂಲನಿವಾಸಿ ಆದಿಮ ಸಂಜಾತ ಬುಡಕಟ್ಟು ಸಮುದಾಯ ದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್. ಇದು ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಯನ್ನು ಶಾಸನಬದ್ಧವಾಗಿ ಅನುಮೋದಿಸ ಬೇಕು. ಕೊಡವರ ಆವಾಸ ಸ್ಥಾನ, ಕೊಡವಲ್ಯಾಂಡ್, ಪಾರಂಪರಿಕ ಪ್ರಾಚೀನ ಭೂಮಿಗಳು, ರಾಜಕೀಯ-ಸಾಂಸ್ಕೃತಿಕ ಹಕ್ಕುಗಳು, ಜಾನಪದ ಗುರುತು, ದೈವಿಕ ವನಗಳು (ದೇವರಕಾಡು), ಮಂದ್ ಗಳಂತಹ ಗರ್ಭಗುಡಿಗಳು, ವನದೇವಿ, ವನ್ಯಮೃಗ, ಪಕ್ಷಿ ಮತ್ತು ಸಸ್ಯ ಸಂಕುಲಗಳು, ನೈಸರ್ಗಿಕ ನೀರು, ಪರ್ವತ ದೇವಿ ದೀರ್ಘಕಾಲಿಕ ನದಿಗಳು, ದೇವಟ್ ಪರಂಬು ಕೊಡವ ನರಮೇಧದ ಸ್ಮಾರಕ, ದುರಂತ ಸ್ಥಳ ಮತ್ತು ಕೊಡವರ ಪವಿತ್ರ ತೀರ್ಥಯಾತ್ರ ಕ್ಷೇತ್ರ ತಲಕಾವೇರಿಯನ್ನು ಅಂತರರಾಷ್ಟಿçÃಯ ಕಾನೂನಿನ ಪ್ರಕಾರ ವಿಶ್ವರಾಷ್ಟç ಸಂಸ್ಥೆ ಆದಿಮಸಂಜಾತರ ಹಕ್ಕುಗಳಡಿಯಲ್ಲಿ ಸಾಂವಿಧಾನಿಕವಾಗಿ ರಕ್ಷಿಸಬೇಕು.

ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡAತೆ ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತವನ್ನು ವಿಶ್ವ ರಾಷ್ಟçಸಂಸ್ಥೆಯ ಆದಿಮ ಸಂಜಾತ ಜನಾಂಗದ ಹಕ್ಕುಗಳ ಕುರಿತು ಹೊರಡಿಸಲಾದ ವಿಧಿ ವಿಧಾನಗಳು ಅಂತರರಾಷ್ಟೀಯ ಕಾನೂನಿನಡಿಯಲ್ಲಿ ಆದಿಮ ಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕೆ ಸಂಪೂರ್ಣವಾಗಿ ಮತ್ತು ಪರಿಪೂರ್ಣವಾಗಿ ಅನ್ವಯವಾಗಲಿದ್ದು, ಈ ಕುರಿತು ಸಂವಿಧಾನಾತ್ಮಕ ಕಸರತ್ತಿಗೆ ಒತ್ತು ನೀಡಬೇಕೆಂದು ಪ್ರತಿಭಟನಾ ನಿರತರು ಒತ್ತಾಯಿಸಿದರು. ಹಕ್ಕೋತ್ತಾಯಗಳ ಜ್ಞಾಪನಾಪತ್ರವನ್ನು ಜಿಲ್ಲಾಡಳಿತದ ಮೂಲಕ ವಿಶ್ವ ರಾಷ್ಟçಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯುನೆಸ್ಕೋ ಮಹಾನಿರ್ದೇಶಕರಿಗೆ ಸಲ್ಲಿಸಲಾಯಿತು.

ಕಲಿಯಂಡ ಮೀನಾ ಪ್ರಕಾಶ್, ಚೋಳಪಂಡ ಜ್ಯೋತಿ ನಾಣಯ್ಯ, ಮುದ್ದಿಯಡ ಲೀಲಾವತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ, ಪಟ್ಟಮಾಡ ಕುಶಾ, ಬೇಪಡಿಯಂಡ ದಿನು, ಅಜ್ಜಿಕುಟ್ಟಿರ ಲೋಕೇಶ್, ಕಿರಿಯಮಾಡ ಶೆರಿನ್, ಅರೆಯಡ ಗಿರೀಶ್, ಮಂದಪAಡ ಮನೋಜ್, ನಂದೇಟಿರ ರವಿ, ಕೂಪದಿರ ಸಾಬು, ಮಣವಟ್ಟಿರ ಚಿಣ್ಣಪ್ಪ, ನಂದಿನೆರವAಡ ಅಪ್ಪಯ್ಯ, ಪುಟ್ಟಿಚಂಡ ದೇವಯ್ಯ, ನಂದಿನೆರವAಡ ವಿಜು, ಚೋಳಪಂಡ ನಾಣಯ್ಯ, ನಂದಿನೆರವAಡ ಅಯ್ಯಣ್ಣ, ಸಾದೇರ ರಮೇಶ್, ಅವರೇಮಾದಂಡ ರಮೇಶ್ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.