ಮಡಿಕೇರಿ, ಆ. ೯: ಕೊಡಗು ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ತಾ. ೩೧ ರವರೆಗೆ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ ನೀಡಿದೆ.
ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಮಕ್ಕಳ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರು ಕಂಡುಬAದಲ್ಲಿ, ಅವರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ, ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವುದು ಹಾಗೂ ಕೆಲಸಕ್ಕೆ ನಿಯೋಜಿಸಿಕೊಂಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಈ ಕಾರ್ಯಾಚರಣೆಯ ಉದ್ದೇಶವಾಗಿರುತ್ತದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಮಾಹಿತಿ ನೀಡಿದ್ದಾರೆ.
ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ತಾ. ೩೧ ರವರೆಗೆ ಮಕ್ಕಳ ರಕ್ಷಣಾ ಕಾರ್ಯಾಚರಣೆಗೆ ಸಂಬAಧಿಸಿದAತೆ ತಪಾಸಣೆ ಮತ್ತು ಹಠಾತ್ ದಾಳಿ ನಡೆಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಮಡಿಕೇರಿ ನಗರದ ಹಳೇ ಖಾಸಗಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ. ಬಸ್ ನಿಲ್ದಾಣ, ಹೊಸ ಖಾಸಗಿ ಬಸ್ ನಿಲ್ದಾಣ, ಟಾಟಾ ಮೋಟಾರ್ಸ್ ಹಾಗೂ ಇತರ ಸಂಸ್ಥೆಗಳಿಗೆ ಕಾರ್ಯಾಚರಣೆ ತಂಡ ಭೇಟಿ ನೀಡಿ ತಪಾಸಣೆ ನಡೆಸಿತು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಮೂಡಿಸಿತು. ಈ ತಪಾಸಣೆಯಲ್ಲಿ ಯಾವುದೇ ಬಾಲಕಾರ್ಮಿಕ ಮಕ್ಕಳು ಕಂಡುಬರಲಿಲ್ಲ.