ಸೋಮವಾರಪೇಟೆ, ಆ. ೯: ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿ ಅಧೀನದ ಮಾರುಕಟ್ಟೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದರೂ ಈವರೆಗೆ ತೆರವುಗೊಳಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪ್ರತಿ ಶನಿವಾರ ಇಲ್ಲಿ ಸಂತೆ ನಡೆಯುತ್ತದೆ. ನೂರಾರು ಮಂದಿ ವರ್ತಕರು, ಗ್ರಾಹಕರು ಸಂತೆಗೆ ಆಗಮಿಸುತ್ತಾರೆ. ಆದರೆ ಮಾರುಕಟ್ಟೆ ಆವರಣ ಮಾತ್ರ ಕಸದಿಂದ ತುಂಬಿ ತುಳುಕುತ್ತಿದೆ. ಇಲ್ಲಿ ಸಂಗ್ರಹಗೊAಡಿರುವ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ತಕ್ಷಣ ವಿಲೇವಾರಿ ಮಾಡಿ ಶುಚಿತ್ವ ಕಾಪಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.