ಮಡಿಕೇರಿ, ಆ. ೯: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ ‘ಸಹಕಾರ ವಿಷಯ ಅಳವಡಿಕೆ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲ್ಯಾಡ್ಯ ಗೊಳ್ಳಬಲ್ಲದು’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ. ರವಿ ಬಸಪ್ಪ ವಹಿಸಿದ್ದರು. ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶೈಲಜಾ, ಯೂನಿಯನ್ ನಿರ್ದೇಶಕ ಕೆ.ಎಂ. ತಮ್ಮಯ್ಯ, ಕೆ.ಐ.ಸಿ.ಎಂ.ನ ಪ್ರಾಂಶುಪಾಲೆ ಡಾ. ಆರ್.ಎಸ್. ರೇಣುಕಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕ ರಾಗಿ ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ ಕಾರ್ಯ ನಿರ್ವಹಿಸಿದರು.
ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ. ಮಾದಯ್ಯ ಉಪಸ್ಥಿತ ರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶುದ್ಧ ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ವಿಜೇತರು
ಪ್ರಬಂಧ ಸ್ಪರ್ಧೆ: ಪ್ರಥಮ ನೇತ್ರ ಹೆಚ್.ಎಸ್. ಮೂರ್ನಾಡು ಸರ್ಕಾರಿ ಪ್ರೌಢಶಾಲೆ, ದ್ವಿತೀಯ ಪ್ರೇರಣ ಎಂ.ಎನ್. ಸಂತ ಜೋಸೆಫರ ಪ್ರೌಢಶಾಲೆ, ಮಡಿಕೇರಿ, ತೃತೀಯ ಕೃತಿಕ ಎ.ಬಿ. ಜ್ಞಾನಜ್ಯೋತಿ ವಿದ್ಯಾಸಂಸ್ಥೆ, ಮೂರ್ನಾಡು, ಸಮಾಧಾನಕರ ಬಹುಮಾನ ಮೊಹಮ್ಮದ್ ಉಮರ್ ಸಾದ್, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ.
ಚರ್ಚಾ ಸ್ಪರ್ಧೆ: ಪ್ರಥಮ ಮಾನ್ಯ ಹೆಚ್.ಎ. ವಿವೇಕಾನಂದ ಪದವಿ ಪೂರ್ವ ಕಾಲೇಜು, ಕುಶಾಲನಗರ, ದ್ವಿತೀಯ ಅದ್ವಿಕ, ಲಯನ್ಸ್ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲು, ತೃತೀಯ ಬನಿತ್ ಬೋಜಣ್ಣ, ಸಂತ ಜೋಸೆಫರ ಪದವಿಪೂರ್ವ ಕಾಲೇಜು, ಮಡಿಕೇರಿ, ಸಮಾಧಾನಕರ ಬಹುಮಾನ ವಿಪಿನ್ ಎ. ಕಾವೇರಿ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲು.