ಮಡಿಕೇರಿ, ಆ. ೯: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೨೦೨೪-೨೫ ನೇ ಸಾಲಿಗೆ ಇಲಾಖೆಯ ಬ್ಯಾಟರಿ ಚಾಲಿತ ಗಾಲಿಕುರ್ಚಿ, ೧೦ನೇ ತರಗತಿ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಮರು ಪಾವತಿಸುವ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ಪ್ರೋತ್ಸಾಹ ಧನ ಯೋಜನೆಗಳಡಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೫ ಕೊನೆಯ ದಿನವಾಗಿದೆ. ಈ ಕಚೇರಿಗೆ ಅಥವಾ ಆಯಾಯ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್ಡಬ್ಲುö್ಯ ಹಾಗೂ ತಾಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಹರೀಶ್ ಟಿ.ಆರ್. ಮೊ. ೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ. ೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ. ೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ. ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ.