ಸೋಮವಾರಪೇಟೆ,ಆ.೯: ಇಲ್ಲಿನ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ, ಮಡಿಕೇರಿ ಜಿಲ್ಲಾ ಕಾನೂನು ಸೇವೆಗಳ ಸೇವಾ ಸಮಿತಿಯ ಸದಸ್ಯ ಕಾರ್ಯ ದರ್ಶಿಯಾಗಿ ವರ್ಗಾವಣೆಗೊಂಡ ನ್ಯಾಯಾಧೀಶರಾದ ಶುಭ ಅವರನ್ನು ವಕೀಲರ ಸಂಘದಿAದ ಸನ್ಮಾನಿಸಿ ಬೀಳ್ಕೊಡಲಾಯಿತು.
ಸೋಮವಾರಪೇಟೆ ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ನ್ಯಾಯಾಧೀಶರಾದ ಶುಭ ಅವರು, ಸೋಮವಾರ ಪೇಟೆಯಲ್ಲಿ ಎರಡು ತಿಂಗಳುಗಳ ಕಾಲ ಸೇವೆ ಸಲ್ಲಿಸಿದ್ದು ಉತ್ತಮ ಅನುಭವ ದೊರೆತಿದೆ. ಇಲ್ಲಿನ ಪರಿಸರ ಉತ್ತಮವಾಗಿದ್ದು, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ. ನ್ಯಾಯಾಲಯದ ಕೆಲಸ ಕಾರ್ಯಗಳಿಗೆ ಸಂಘದ ವತಿಯಿಂದ ಸಂಪೂರ್ಣ ಸಹಕಾರ ಸಿಕ್ಕಿದೆ ಎಂದು ಸ್ಮರಿಸಿದರು. ವೇದಿಕೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ, ವಕೀಲರ ಸಂಘದ ಉಪಾಧ್ಯಕ್ಷೆ ಎಚ್.ಆರ್. ಪವಿತ್ರ, ಕಾರ್ಯದರ್ಶಿ ಡಿ.ಎ. ಕೃಷ್ಣಕುಮಾರ್ ಅವರುಗಳು ಉಪಸ್ಥಿತರಿದ್ದರು.