ಮಡಿಕೇರಿ, ಆ. ೯: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು, ಸಂಪಾಜೆ ಹೋಬಳಿ ಕ.ಸಾ.ಪ. ಹಾಗೂ ಪೆರಾಜೆಯ ಜ್ಯೋತಿ ವಿದ್ಯಾ ಸಂಘ ಸಂಯುಕ್ತಾಶ್ರಯದಲ್ಲಿ ತಾ. ೧೦ ರಂದು (ಇಂದು) ಮಧ್ಯಾಹ್ನ ೨ ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ದಿ. ಗಂಗಾಧರ ಶೇಟ್ ಸುಲೋಚನ ಬಾಯಿ ಸ್ಮಾರಕ ‘ಕೊಡಗಿನ ಸ್ವಾತಂತ್ರö್ಯ ಹೋರಾಟಗಾರರ ನೆನಪು’ ವಿಷಯದಲ್ಲಿ ಪೆರಾಜೆಯ ಜ್ಯೋತಿ ಪ್ರೌಢಶಾಲೆಯಲ್ಲಿ ದತ್ತಿ ಉಪನ್ಯಾಸ ನಡೆಯಲಿದೆ. ಸಂಪಾಜೆ ಹೋಬಳಿ ಕ.ಸಾ.ಪ ಅಧ್ಯಕ್ಷ ಗೋಪಾಲ್ ಪೆರಾಜೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷ ಡಾ. ಎನ್.ಎ. ಜ್ಞಾನೇಶ್ ಉದ್ಘಾಟಿಸಲಿದ್ದಾರೆ. ಕ.ಸಾ.ಪ. ಜಿಲ್ಲಾಧ್ಯಕ್ಷ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ದತ್ತಿ ವಿಷಯದ ಕುರಿತು ಲೇಖಕಿ ಸಹನಾ ಕಾಂತಬೈಲು ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ, ಸದಸ್ಯ ಸುರೇಶ್ ಪೆರುಮುಂಡ, ಜ್ಯೋತಿ ಪ್ರೌಢಶಾಲೆ ಸಂಚಾಲಕ ಮುಡುಕಜೆ ಹರಿಶ್ಚಂದ್ರ, ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜ್ಯೋತಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗರಾಜ್, ಕ.ಸಾ.ಪ. ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹಮ್ಮದ್, ರೇವತಿ ರಮೇಶ್, ಎಸ್.ಎಸ್. ಸಂಪತ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.