ಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸುವುದಿಲ್ಲ-ಸಿದ್ದರಾಮಯ್ಯ

ಮೈಸೂರು, ಆ. ೯: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ, ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ಎಸ್‌ಐಟಿ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. ೫೦ ಕೋಟಿ ರೂಪಾಯಿಯನ್ನು ರಿಕವರಿ ಮಾಡಿ ಆಗಿದೆ. ೪೬ ಕೋಟಿ ಹಣ ಖಾಸಗಿ ಬ್ಯಾಂಕ್‌ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ತನಿಖೆ ನಡೆಸಿದ್ದಾರೆ. ಆದರೂ ಇ.ಡಿ. ಯವರು ಸ್ವಯಂಪ್ರೇರಣೆಯಿAದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆಗೆ ಕೋರ್ಟ್ ನಕಾರ

ನವದೆಹಲಿ, ಆ. ೯: ಆಗಸ್ಟ್ ೧೧ ರಂದು ನಿಗದಿಯಾಗಿರುವ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡುವAತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನೀಟ್-ಪಿಜಿ ಪರೀಕ್ಷೆ ಮುಂದೂಡುವAತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಐದು ವಿದ್ಯಾರ್ಥಿಗಳಿಗಾಗಿ ಎರಡು ಲಕ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ಇಂತಹ ಪರೀಕ್ಷೆಯನ್ನು ನಾವು ಹೇಗೆ ಮುಂದೂಡಬಹುದು. ಸಂಜಯ್ ಹೆಗ್ಡೆ ಅವರೇ ಇತ್ತೀಚಿನ ದಿನಗಳಲ್ಲಿ ಜನ ಸುಖಾಸುಮ್ಮನೇ ಪರೀಕ್ಷೆ ಮುಂದೂಡುವAತೆ ಕೋರಿ ಕೋರ್ಟ್ಗೆ ಬರುತ್ತಾರೆ. ಇದು ಪರಿಪೂರ್ಣ ಜಗತ್ತಲ್ಲ. ನಾವು ಶೈಕ್ಷಣಿಕ ತಜ್ಞರಲ್ಲ. ತಾತ್ವಿಕವಾಗಿ, ನಾವು ಪರೀಕ್ಷೆಯನ್ನು ಮುಂದೂಡುವುದಿಲ್ಲ. ನಾವು ಪರೀಕ್ಷೆ ಮುಂದೂಡಿದರೆ ಎರಡು ಲಕ್ಷ ವಿದ್ಯಾರ್ಥಿಗಳು ಮತ್ತು ನಾಲ್ಕು ಲಕ್ಷ ಪೋಷಕರು ಕಣ್ಣೀರು ಹಾಕುತ್ತಾರೆ. ಈ ಅರ್ಜಿಗಳ ಹಿಂದೆ ಯಾರಿದ್ದಾರೆ ಎಂದು ನಮಗೆ ಗೊತ್ತಿಲ್ಲ ಎಂದು ಪೀಠ ಹೇಳಿದೆ.

ಸಿದ್ದರಾಮಯ್ಯ ವಿರುದ್ಧದ ದೂರಿನ ವಿಚಾರಣೆ

ಬೆಂಗಳೂರು, ಆ. ೯: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ನೇಹಮಯಿ ಕೃಷ್ಣ ಎಂಬವರು ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಆದೇಶ ಕಾಯ್ದಿರಿಸಿ ವಿಚಾರಣೆಯನ್ನು ತಾ. ೧೩ಕ್ಕೆ ಮುಂದೂಡಿದೆ. ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಬಗ್ಗೆ ತಾ. ೧೩ ರಂದು ಆದೇಶ ಪ್ರಕಟಿಸುವ ಸಾಧ್ಯತೆ ಇದೆ. ದೂರುದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷಿö್ಮ ಅಯ್ಯಂಗಾರ್ ಅವರು, ಸಿದ್ದರಾಮಯ್ಯ ಡಿಸಿಎಂ ಆಗಿದ್ದಾಗ ಮಾಲೀಕರೇ ಅಲ್ಲದ ವ್ಯಕ್ತಿ ಪರವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ. ಈ ಜಮೀನಿನಲ್ಲಿ ದೇವನೂರು ಬಡಾವಣೆ ರಚನೆಯಾಗಿದೆ. ೨೦೦೪ರಲ್ಲಿ ಮುಖ್ಯಮಂತ್ರಿ ಪತ್ನಿಯ ಸಹೋದರ ದೇವರಾಜುನಿಂದ ಜಮೀನು ಖರೀದಿಸಲಾಗಿದೆ. ಆಗಲೂ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. ಖರೀದಿಗೆ ಹಣದ ಮೂಲದ ಬಗ್ಗೆ ಪ್ರಶ್ನೆಯಿದೆ. ದೇವನೂರು ಬಡಾವಣೆಯಲ್ಲಿ ಈಗಲೂ ಖಾಲಿ ನಿವೇಶನಗಳಿವೆ. ಆದರೆ ದುಬಾರಿ ಬೆಲೆಯ ವಿಜಯನಗರ ಬಡಾವಣೆಯಲ್ಲಿ ಬದಲಿ ನಿವೇಶನ ನೀಡಲಾಗಿದೆ ಎಂದು ಹೇಳಿದರು.

ಮಣಿಪುರದ ಕಕ್ಚಿಂಗ್‌ನಲ್ಲಿ ಗುಂಡಿನ ಚಕಮಕಿ

ಇಂಫಾಲ್, ಆ. ೯: ಮಣಿಪುರದ ಕಕ್ಚಿಂಗ್ ಜಿಲ್ಲೆಯಲ್ಲಿ ಶಸ್ತಾçಸ್ತçಧಾರಿ ಬಂಡುಕೋರರ ಗುಂಪುಗಳ ನಡುವೆ ಶುಕ್ರವಾರ ಗುಂಡಿನ ಚಕಮಕಿ ನಡೆದಿದೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ. ಒಂದೇ ಸಮುದಾಯಕ್ಕೆ ಸೇರಿದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಬಿರೇನ್ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಬಿಷ್ಣುಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರಿಗಾಗಿ ನಿರ್ಮಿಸಲಾಗುತ್ತಿದ್ದ ಮನೆಯ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ಮೇಲೆ ಗುರುವಾರ ಶಸ್ತಾçಸ್ತçಧಾರಿಯೊಬ್ಬ ಗುಂಡು ಹಾರಿಸಿದ್ದಾನೆ. ಭದ್ರತಾ ಪಡೆಗಳು ಮರುದಾಳಿ ನಡೆಸಿದ್ದು, ಸುಮಾರು ೩೦ ನಿಮಿಷ ಗುಂಡಿನ ಚಕಮಕಿ ನಡೆದಿದೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.