ವೀರಾಜಪೇಟೆ, ಆ. ೯: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ತಾಲೂಕು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾ. ೧೪ ರಂದು ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸ್ಪರ್ಧೆಯ ಸಂಚಾಲಕ ಎಂ.ಎ. ಕೃಷ್ಣ ತಿಳಿಸಿದ್ದಾರೆ.
ವೀರಾಜಪೇಟೆ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ನವ ಭಾರತ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಲಿದ್ದು, ಒಂದು ಶಾಲೆಯಿಂದ ಒಂದು ವಿದ್ಯಾರ್ಥಿ ಮತ್ತು ಒಂದು ವಿದ್ಯಾರ್ಥಿನಿಗೆ ಮಾತ್ರ ಅವಕಾಶವಿರುತ್ತದೆ. ಕನ್ನಡ ಭಾಷೆಯಲ್ಲಿ ಭಾಷಣ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ವ್ಯಾಸಂಗ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆಗೆ ಗರಿಷ್ಠ ೩ ನಿಮಿಷ ಮಾತ್ರ ಅವಕಾಶವಿರುತ್ತದೆ. ಸಿದ್ದಾಪುರದ ವೀರಾಜಪೇಟೆ ರಸ್ತೆಯ ಸೆಂಟನರಿ ಚರ್ಚ್ ಹಾಲ್ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದ್ದು, ತಾ. ೧೨ ರೊಳಗಾಗಿ ವಿದ್ಯಾರ್ಥಿಗಳ ಹೆಸರನ್ನು ನೋಂದಾಯಿಸಬೇಕು. ತಾ. ೧೪ ರಂದು ಸಂಜೆ ೩ ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ೯೭೩೧೭೮೩೧೪೯, ೯೯೦೨೦೪೮೫೭೭ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.