ಮಡಿಕೇರಿ, ಆ. ೯: ನಾಗಾರಾಧನೆಯ ನಾಗರ ಪಂಚಮಿ ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪ್ರಮುಖವಾಗಿ ಮಹಿಳೆಯರು ಅಶ್ವತ್ಥ ಕಟ್ಟೆ ಹಾಗೂ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಿದರು. ಜಿಲ್ಲಾ ಕೇಂದ್ರ ಮಡಿಕೇರಿಯ ದೇಚೂರುವಿನಲ್ಲಿರುವ ಅಶ್ವತ್ಥ ಕಟ್ಟೆ, ದಂಡಿನ ಮಾರಿಯಮ್ಮ, ಮುತ್ತಪ್ಪ ದೇವಾಲಯ, ಕೋಟೆ ಮಾರಿಯಮ್ಮ ದೇವಾಲಯ ಸೇರಿದಂತೆ ಇತರ ದೇವಾಲಯಗಳ ಆವರಣದಲ್ಲಿರುವ ನಾಗನ ಕಲ್ಲಿಗೆ ಪೂಜೆ ಸಲ್ಲಿಸಲಾಯಿತು. ಉಳಿದಂತೆ ಎಲ್ಲಾ ದೇವಾಲಯಗಳಲ್ಲೂ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮನೆ ಮನೆಗಳಲ್ಲೂ ಹೆಂಗಳೆಯರು ನಾಗನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕೊರಗಜ್ಜ ದೇವಾಲಯದಲ್ಲಿ
ಸಿದ್ದಾಪುರ : ಅಮ್ಮತ್ತಿ
ಸಮೀಪದ
ಹಚ್ಚಿನಾಡು
ಗ್ರಾಮದ
ಎಡೂರು
ಗ್ರಾಮದಲ್ಲಿರುವ ಕಲ್ಲುರ್ಟಿ ಶ್ರೀ ಕೊರಗಜ್ಜ ದೇವಾಲಯದಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳು ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ಭಕ್ತಾದಿ ಗಳಿಗೆ ಅನ್ನಸಂತರ್ಪಣೆ ಏರ್ಪಡಿ¸ Àಲಾಗಿತ್ತು ದೇವಾಲಯದ ಪ್ರಮುಖ ರಾದ ಲವನ್ ಪೂಜಾರಿ, ಇನ್ನಿತರರು ಹಾಜರಿದ್ದರು.
ವೀರಾಜಪೇಟೆ : ನಾಗರ ಪಂಚಮಿ ಹಬ್ಬದ ಪ್ರಯುಕ್ತ ಪಟ್ಟಣದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ಹಾಗೂ ನಾಗ ದೇವಸ್ಥಾನದಲ್ಲಿ ದೇವರಿಗೆ ಹಾಲು ಎಳನೀರು ಅಭಿಷೇಕದೊಂದಿಗೆ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ನಾಗರ ಪಂಚಮಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ದೇವರಿಗೆ ವಿಶೇಷ ಪೂಜೆಗಳು ನಡೆದು ಮಧ್ಯಾಹ್ನ ದುರ್ಗಿ ವಿಷ್ಣುಮೂರ್ತಿಯ ಉತ್ಸವ ದೇವಾಲಯದ ಆವರಣದಲ್ಲಿ ನಡೆಯಿತು. ನಂತರ ಮಹಾಪೂಜೆ ಬಳಿಕ ಪ್ರಸಾದ ವಿನಿಯೋಗ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯದ ಅಧ್ಯಕ್ಷ ಚಂದ್ರಶೇಖರ್ ಹಾಗೂ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಿಂದಲೂ ಭಕ್ತಾದಿಗಳು ಭಾಗವಹಿಸಿದ್ದರು.ವೀರಾಜಪೇಟೆ : ನಾಗರಪಂಚಮಿಯ ಪ್ರಯುಕ್ತ ಸಮೀಪದ ಬೇಟೋಳಿ ಗ್ರಾಮದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿರುವ ಶ್ರೀ ನಾಗ ದೇವರ ಗುಡಿಯಲ್ಲಿ ನಾಗ ತಂಬಿಲ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆಯಿಂದಲೇ ಅರ್ಚಕರು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು. ಮೊದಲಿಗೆ ಶ್ರೀ ಮಹಾಗಣಪತಿ, ಪುದುಪಾಡಿ ಅಯ್ಯಪ್ಪ ಸ್ವಾಮಿ ಹಾಗೂ ವನದುರ್ಗಿ ದೇವರುಗಳಿಗೆ ಪೂಜೆ ಸಲ್ಲಿಸಲಾಯಿತು. ತದನಂತರ ನಾಗದೇವರ ಗುಡಿಯಲ್ಲಿ ಸಂಕಲ್ಪವನ್ನು ಮಾಡಲಾಯಿತು. ಶ್ರೀ ನಾಗದೇವರಿಗೆ ಹಾಲಿನ ಅಭಿಷೇಕ ಹಾಗೂ ಸೀಯಾಳ ಅಭಿಷೇಕವನ್ನು ಮಾಡಲಾಯಿತು. ಹೂವಿನ ವಿಶೇಷ ಅಲಂಕಾರ ಹಾಗೂ ಪುಷ್ಪಾರ್ಚನೆ, ಕುಂಕುಮಾರ್ಚನೆ ಸೇವೆಗಳನ್ನು ನಡೆಸಿ ಅರ್ಚಕರು ನಾಗ ತಂಬಿಲ ಸೇವೆಯನ್ನು ನೆರವೇರಿಸಿದರು. ಮಹಾಪೂಜೆ, ಮಂಗಳಾರತಿಯ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಣಾ ಕಾರ್ಯಕ್ರಮ ನಡೆಯಿತು. ಬೇಟೋಳಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಆಗಮಿಸಿ ನಾಗದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ನೇತೃತ್ವದಲ್ಲಿ ಜರುಗಿತು. ಭಕ್ತಾದಿಗಳಿಗೆ ಅನ್ನಸಂತರ್ಪಣಾ ಸೇವೆಯು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧೆಡೆ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಮೀಪದ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತÀಪ್ಪ ದೇವಾಲಯ, ಕೂರುಳಿ ಸುಭಾಷ್ ನಗರ ಹಾಗೂ ಬಲ್ಲಮಾವಟಿಯ ಶ್ರೀ ಭಗವತಿ ದೇವಾಲಯಗಳಲ್ಲಿ ನಾಗರ ಪಂಚಮಿಯನ್ನು ಆಚರಿಸಲಾಯಿತು.
ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಅರ್ಚಕ ಜಗದೀಶ್ ಭಟ್ ದೇವಾಲಯದ ನಾಗನ ಕಟ್ಟೆಯಲ್ಲಿ ವಿಶೇಷ ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭ ದೇವಾಲಯದ ದೇವತಕ್ಕರು, ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ ಸೇರಿದಂತೆ ಭಕ್ತಾದಿಗಳು ಭಾಗವಹಿಸಿದ್ದರು. ಬಳಿಕ ದೇವಾಲಯದಲ್ಲಿ ವಿಶೇಷ ಮಹಾಪೂಜೆ, ಅನ್ನದಾನ ನೆರವೇರಿತು.
ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಅರ್ಚಕ ದೇವಿ ಪ್ರಸಾದ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ದೇವಾಲಯದಲ್ಲಿ ನಾಗನ ಕಲ್ಲಿಗೆ ಹಾಲು, ಎಳನೀರು ಅಭಿಷೇಕ ಸೇರಿದಂತೆ ಹಣ್ಣು ಕಾಯಿ ಪೂಜೆಯನ್ನು ನೆರವೇರಿಸಿ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಿದರು. ಈ ಸಂದರ್ಭ ದೇವಾಲಯದ ಪಾರುಪತ್ತೆಗಾರ ಮನು ಸೇರಿದಂತೆ ಭಕ್ತಾದಿಗಳು ಪಾಲ್ಗೊಂಡಿದ್ದರು.
ಕೂರುಳಿ ಸುಭಾಷ್ ನಗರದಲ್ಲಿ ಶ್ರೀ ಭಗವತಿ ದೇವಾಲಯದ ಅರ್ಚಕ ಹರೀಶ್ ಭಟ್ ನಾಗನಕಟ್ಟೆಯಲ್ಲಿ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ ಮಂಗಳಾರತಿ ಮಹಾಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ನಗರದ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಬಲ್ಲಮಾವಟಿ ಗ್ರಾಮದ ಭಗವತಿ ದೇವಾಲಯದ ಸಮೀಪ ನಾಗನಕಟ್ಟೆಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಅರ್ಚಕ ಶಶಿಧರ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.
ಭಕ್ತಾದಿಗಳು ಅವರ ವ್ಯಾಪ್ತಿಯ ವಿವಿಧ ದೇವಾಲಯಗಳಿಗೆ ತೆರಳಿ ನಾಗದೇವತೆಗೆ ನಮನ ಸಲ್ಲಿಸಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿ ಹಬ್ಬವನ್ನು ಆಚರಿಸಿದರು.
ಸೋಮವಾರಪೇಟೆ : ನಾಗರ ಪಂಚಮಿ ಹಬ್ಬವನ್ನು ಸೋಮವಾರಪೇಟೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ದಿನದ ಅಂಗವಾಗಿ ದೇವಾಲಯ ಗಳಲ್ಲಿ ವಿಶೇಷ ಪೂಜೆಗಳು ನಡೆದವು. ನಾಗಬನ, ನಾಗರ ಮೂರ್ತಿ ಪ್ರತಿಷ್ಠಾಪನೆಗೊಂಡಿರುವ ದೇವಾಲಯಗಳಲ್ಲಿ ವಿವಿಧ ಸೇವೆಗಳು, ವಿಶೇಷ ಅಲಂಕಾರಗಳೊAದಿಗೆ ನಾಗರ ಪಂಚಮಿ ಆಚರಿಸಲಾಯಿತು.
ಸಿದ್ದಲಿಂಗಪುರ ಅರಸಿನಕುಪ್ಪೆ ಗ್ರಾಮದ ಶ್ರೀನವನಾಗ ಕ್ಷೇತ್ರದಲ್ಲಿ ನಾಗರಪಂಚಮಿ ಹಾಗೂ ಪಂಚಮಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಕ್ಷೇತ್ರದ ಗುರುಗಳಾದ ಶ್ರೀ ರಾಜೇಶ್ನಾಥ್ ಜೀ ಅವರ ಮಾರ್ಗದರ್ಶನದಲ್ಲಿ, ದೇವಾಲಯದ ಪ್ರಧಾನ ಅರ್ಚಕ ಜಗದೀಶ್ ಉಡುಪ ಅವರ ಪೌರೋಹಿತ್ವದಲ್ಲಿ ಮಂಜುನಾಥ ಕ್ಷೇತ್ರದಲ್ಲಿ ಗಣಪತಿ ಹೋಮ, ದೇವರಿಗೆ ಅಭಿಷೇಕ, ನಾಗದೇವರಿಗೆ ವಿಶೇಷ ಅಲಂಕಾರ, ತಂಬಿಲ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.
ಪಟ್ಟಣದ ಶ್ರೀ ಮುತ್ತಪ್ಪ ಮತ್ತು ಅಯ್ಯಪ್ಪ ದೇವಾಲಯದ ನಾಗ ಬನದಲ್ಲಿ ದಿನದ ಅಂಗವಾಗಿ ವಿಶೇಷ ಪೂಜೆಗಳು ನಡೆದವು. ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ಪೌರೋಹಿತ್ವದಲ್ಲಿ ಅಲಂಕಾರ, ಸೇವೆಗಳು, ಮಹಾಮಂಗಳಾರತಿ ಜರುಗಿತು. ಪುಷ್ಪಗಿರಿ ಶ್ರೀ ಶಾಂತ ಮಲ್ಲಿಕಾರ್ಜುನ ದೇವಾಲಯದಲ್ಲಿ ಪ್ರಧಾನ ಅರ್ಚಕ ನಂದೀಶ ಭಟ್ ನೇತೃತ್ವದಲ್ಲಿ ಪೂಜೆಗಳು ನಡೆದವು. ಇದರೊಂದಿಗೆ ಪಟ್ಟಣದ ಸೋಮೇಶ್ವರ ದೇವಾಲಯದಲ್ಲಿರುವ ನಾಗಬನದಲ್ಲಿ, ಚಂದನಮಕ್ಕಿಯ ನಾಗಬನದಲ್ಲಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ದಿನದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.ಸುಂಟಿಕೊಪ್ಪ : ಜಿಲ್ಲೆಯಾದ್ಯಂತ ಸಂಭ್ರಮದ ನಾಗರಪಂಚಮಿ ಹಬ್ಬವನ್ನು ಶೃದ್ಧಾಭಕ್ತಿಯಿಂದ ಆಚರಿಸಲಾಯಿತು.
ಕೊಡಗರಹಳ್ಳಿಯಲ್ಲಿರುವ ಶ್ರೀಬೈತೂರಪ್ಪ, ಪೊವ್ವದಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಇರುವ ನಾಗಸ್ಥಾನದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರಾದ ನರಸಿಂಹಭಟ್, ಸಹ ಅರ್ಚಕರಾದ ರಾಮಶರ್ಮ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆದವು.
ಈ ಸಂದರ್ಭ ದೇವಾಲಯ ಟ್ರಸ್ಟ್ ಅಧ್ಯಕ್ಷ ಕೆ.ಎನ್. ಪೂಣಚ್ಚ, ಕಾರ್ಯದರ್ಶಿ ಬಿ.ಸಿ. ದಿನೇಶ್, ಖಜಾಂಜಿ ಡಾ. ತಮ್ಮಯ್ಯ, ಟ್ರಸ್ಟಿಗಳು, ದೇವಾಲಯ ಪಾರುಪತ್ತೆಗಾರ ಅಕ್ಕಪಂಡ ರಾಜೇಂದ್ರ ಸೇರಿದಂತೆ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಸುAಟಿಕೊಪ್ಪ ಪನ್ಯ ಗ್ರಾಮದಲ್ಲಿ ನೆಲೆನಿಂತಿರುವ ಗ್ರಾಮ ದೇವತೆಯಾದ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ನಾಗರಪಂಚಮಿ ಪ್ರಯುಕ್ತವಾಗಿ ವಿಶೇಷ ಪೂಜೆ ನಡೆದವು.
ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯ ವಿವಿಧ ದೇವಾಲಯ ಹಾಗೂ ಹೋಬಳಿ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ನಾಗರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ನೆರವೇರಿಸಲಾಯಿತು.ಪೊನ್ನಂಪೇಟೆ : ಪೊನ್ನಂಪೇಟೆ ತಾಲೂಕಿನ ಹಳ್ಳಿಗಟ್ಟು ಗ್ರಾಮದಲ್ಲಿರುವ ಶ್ರೀ ಭದ್ರಕಾಳಿ ದೇವಸ್ಥಾನದ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜಾ ವಿಧಿ ವಿಧಾನಗಳು ನಡೆದವು. ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ವಿಶೇಷ ಪೂಜೆ, ಸಾಮೂಹಿಕ ಆಶ್ಲೇಷಾ ಬಲಿ ಪೂಜೆ ಹಾಗೂ ಪಂಚಾಮೃತಾಭಿಷೇಕ ಪೂಜೆ ನಡೆಯಿತು. ನೆರೆದಿದ್ದ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ತೀರ್ಥ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ, ಗೌ. ಕಾರ್ಯದರ್ಶಿ ಮೂಕಳೇರ ರಮೇಶ್, ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.
ಕರಿಕೆ: ಇಲ್ಲಿಗೆ ಸಮೀಪದ ಚೆತ್ತುಕಾಯ ಶ್ರೀ ವನಶಾಸ್ತಾವು ದೇವಾಲಯದ ಆವರಣದಲ್ಲಿ ನಾಗರ ಪಂಚಮಿಯನ್ನು ಆಚರಿಸಲಾಯಿತು. ಕ್ಷೇತ್ರದ ಪುರೋಹಿತರಾದ ಶ್ರೀ ಗೌರಿಶಂಕರ ಭಟ್ ಶ್ರೀ ವನಶಾಸ್ತಾವು ದೇವರಿಗೆ ವಿಶೇಷ ಪೂಜೆ ನೆರವೇರಿಸಿ ನಂತರ ನಾಗ ದೇವರಿಗೆ ಕ್ಷೀರಾಭಿಷೇಕ, ಸೀಯಾಳಭಿಷೇಕ ಸೇರಿದಂತೆ ವಿವಿಧ ಸೇವೆಗಳನ್ನು ನೆರವೇರಿಸಿದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧÀ್ಯಕ್ಷ ಕೆ.ಎ. ನಾರಾಯಣ, ಕಾರ್ಯದರ್ಶಿ ತಾರೇಶ್ ಹೊದ್ದೆಟ್ಟಿ, ಉಪಾಧ್ಯಕ್ಷ ಕೆ.ಡಿ. ಬಾಲಕೃಷ್ಣ ಸೇರಿದಂತೆ ಇತರೆ ಪ್ರಮುಖರು, ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.ಸಿದ್ದಾಪುರ : ನಾಗರ ಪಂಚಮಿ ಅಂಗವಾಗಿ ಸಿದ್ದಾಪುರದ ಶ್ರೀ ಮುತ್ತಪ್ಪ ಭಗವತಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮಗಳು ನಡೆಯಿತು. ಸಿದ್ದಾಪುರದ ಸುತ್ತಮುತ್ತ ಗ್ರಾಮದ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.
ಸಿದ್ದಾಪುರ : ನಾಗರ ಪಂಚಮಿ ಅಂಗವಾಗಿ ಸಿದ್ದಾಪುರದ ಶ್ರೀ ಮುತ್ತಪ್ಪ ಭಗವತಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮಗಳು ನಡೆಯಿತು. ಸಿದ್ದಾಪುರದ ಸುತ್ತಮುತ್ತ ಗ್ರಾಮದ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.