ಮಡಿಕೇರಿ, ಆ. ೧೦: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೧೧ ರಂದು (ಇಂದು) ಪತ್ರಿಕಾಭವನದಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದ ಸಂಚಾಲಕಿ ಯಶೋಧ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅತಿಥಿಗಳಾಗಿ ರಾಜ್ಯ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜಿಲ್ಲಾ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ನಿವೃತ್ತ ಕಂದಾಯ ಅಧಿಕಾರಿ ಟಿ.ಕೆ. ಪ್ರಕಾಶ್, ಸುಂಟಿಕೊಪ್ಪ ಗ್ರಾ.ಪಂ. ಸದಸ್ಯ ರಫೀಕ್ ಖಾನ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು ೧೬ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ. ಇದೇ ಸಂದರ್ಭ ರಾಜ್ಯ ಸಂಘದಿAದ ಪ್ರಶಸ್ತಿ ಪಡೆದ ಬಾಚರಣಿಯಂಡ ಅನು ಕಾರ್ಯಪ್ಪ, ಸಣ್ಣುವಂಡ ಕಿಶೋರ್ ನಾಚಪ್ಪ ಹಾಗೂ ಪಿ.ವಿ. ಅಕ್ಷಯ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಉತ್ತಮ ಸಂಘ ಎಂಬ ಪ್ರಶಸ್ತಿಯನ್ನು ಪಡೆದ ಪೊನ್ನಂಪೇಟೆ ತಾಲೂಕು ಸಂಘವನ್ನು ಗೌರವಿಸಲಾಗುವುದು. ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಕವಾದ ಸಂಘದ ಸದಸ್ಯ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಡಾಕ್ಟರೇಟ್ ಪದವಿ ಪಡೆದಿರುವ ಸಂಘದ ಸದಸ್ಯ ಹೇಮಂತ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.